ಬಿ.ಆರ್.ಬಿ. ಕಾಲೇಜಿನಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ

ರಾಯಚುರು.ಸೆ.೧೮- ಪ್ರತಿಷ್ಠಿತ ತಾರಾನಾಥ ಶಿಕ್ಷಣ ಸಂಸ್ಥೆಯ ಬಿ.ಆರ್.ಬಿ. ವಾಣಿಜ್ಯ ಮಹಾವಿದ್ಯಾಲಯಲದಲ್ಲಿ ಕಲ್ಯಾಣ ಕರ್ನಾಟಕದ ಉತ್ಸವವನ್ನು ಆಚರಿಸಲಾಯಿತು. ಪ್ರಾಚಾರ್ಯರಾದ ಡಾ.ಶೀಲಾಕುಮಾರಿ ದಾಸ್ ಅವರು ಧ್ವಜಾರೋಹಣ ಮಾಡಿದರು. ನಂತರ ಎನ್.ಎಸ್.ಎಸ್., ಎನ್.ಸಿ.ಸಿ., ರೋವರ್-ರೇಂಜರ್, ಗ್ರೀನ್ ವಾರಿಯರ್‍ಸ್ ಪರೇಡ್ ಮಾಡುವ ಮೂಲಕ ಧ್ವಜಾ ವಂದನೆ ಮಾಡಿದರು. ಸಭೆಯನ್ನು ಉದ್ದೇಶಿಸಿ ಶ್ರೀ ಜಿ ಸುರೇಶ, ಡಾ.ಶೀಲಾಕುಮಾರಿ ದಾಸ್ ಮಾತನಾಡಿದರು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಈ ಕಾರ್ಯಕ್ರವ್ಮದಲ್ಲಿ ವ್ಯವಸ್ಥಾಪಕ ಮಂಡಳಿಯ ಕಾರ್ಯದರ್ಶಿಗಳಾದ ಚೇರನ ದೋಖಾ, ಸದಸ್ಯರಾದ ಮೀತಲ್ ವಿಕಾಸ್ ಬೂಬ್ , ಜಿ ಸುರೇಶ, ಉಪ-ಪ್ರಾಚಾರ್ಯರಾದ ಶ್ರೀ.ಸಂಪತ ಅಂಗಡಿ ವಿ, ಬೋಧಕ-ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.