ಬಿ.ಆರ್.ಬಿ. ಕಾಲೇಜಿನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ

ರಾಯಚೂರು.ಅ.೨೮- ಪ್ರತಿಷ್ಠಿತ ತಾರಾನಾಥ ಶಿಕ್ಷಣ ಸಂಸ್ಥೆಯ ಬಿ.ಆರ್.ಬಿ. ವಾಣಿಜ್ಯ ಮಹಾವಿದ್ಯಾಲಯಲದಲ್ಲಿ ದಿನಾಂಕ ೨೮.೧೦.೨೦೨೨ ರಂದು ಬೆಳಗ್ಗೆ ೧೧.೦೦ ಗಂಟೆಗೆ ಕರ್ನಾಟಕ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಪ್ರಾಚಾರ್ಯರಾದ ಡಾ ಶೀಲಾಕುಮಾರಿ ದಾಸ ಅವರು ಸಂಕಲ್ಪ ಪ್ರಮಾಣ ವಚನವನ್ನು ಬೋಧಿಸಿದ್ದರು. ಕನ್ನಡ ನುಡಿಯನ್ನು ಸಾರುವ ಆರು ಕನ್ನಡ ಗೀತೆಗಳನ್ನು ವಿದ್ಯಾರ್ಥಿಗಳು ಹಾಡಿ ಕುಣಿದು ಸಂಭ್ರ್ರಮಿಸಿದರು. ಈ ಕಾರ್ಯಕ್ರಮದಲ್ಲಿ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿಯವರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.