ಬಿ.ಎಸ್.ಪಾಟೀಲ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕಲಬುರಗಿ : ನ.25: 67 ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಶ್ರೀ ಸುಭಾಶ್ಚಂದ್ರ ಸ್ಮಾರಕ ಜನಕಲ್ಯಾಣ ಟ್ರಸ್ಟ್ ವತಿಯಿಂದ ಸೆಂಟ್ ಮೇರಿ ಸಭಾಂಗಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸಾಂಸ್ಕøತಿಕ ಸಂಭ್ರಮ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಾಗೂ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಮತ್ತು ಬೋಧಕಕೇತರ ಸಂಘಟನೆಗಳ ಒಕ್ಕೂಟದ ಉಪಾಧ್ಯಕ್ಷರಾದ ಬಿ.ಎಸ್.ಪಾಟೀಲ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶ್ರೀನಿವಾಸ ಸರಡಗಿಯ ಚಿಕ್ಕಹಿರೇಶ್ವರ ಹಿರೇಮಠದ ಪಿಠಾಧಿಪತಿ ಶ್ರೀ ಷ.ಬ್ರ.ಡಾ.ರೇವಣಸಿದ್ಧಶಿವಾಚಾರ್ಯರು ಪ್ರಶಸ್ತಿ ಪ್ರದಾನ ಮಾಡಿದರು.

ಟ್ರಸ್ಟ್ ಅಧ್ಯಕ್ಷ ಶರಣಗೌಡ ಪಾಟೀಲ್ ಪಾಳಾ, ಸಾಹಿತಿ ಬಿ.ಹೆಚ್.ನಿರಗುಡಿ, ಡಾ.ಚಿ.ಸಿ.ನಿಂಗಣ್ಣ, ಫಾದರ್ ಸಂತೋಷ ಶರಣಬಸಪ್ಪ ವಡ್ಡನಕೇರಿ ಸೇರಿದಂತೆ ಇತರರು ಇದ್ದರು.