ಬಿ.ಎಸ್.ಯಡಿಯೂರಪ್ಪ ಶೀಘ್ರ ಗುಣಮುಖರಾಗಲಿ’ : ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ, ಎ. 17: ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ
ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ಶೀಘ್ರ
ಗುಣಮುಖರಾಗಲಿ ಎಂದು ಪ್ರಾಥರ್ಿಸುವುದಾಗಿ ಗ್ರಾಮೀಣಾಭಿವೃದ್ದಿ, ಪಂಚಾಯತ್ ರಾಜ್ ಇಲಾಖೆ
ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
 ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಜ್ಯದ ಏಳ್ಗೆಗೆ ನಿರಂತರವಾಗಿ ಶ್ರಮಿಸಿಸುತ್ತಿರುವ ಯಡಿಯೂರಪ್ಪರವರು, ಶೀಘ್ರ
ಗುಣಮುಖರಾಗಿ ಮತ್ತೆ ಜನಸೇವೆಗೆ ಮರಳುವಂತಾಗಲಿ ಎಂದು ಹೇಳಿದ್ದಾರೆ.
ಸಭೆ: ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ಎದುರಿಸುವ ಕುರಿತಂತೆ ಸಕರ್ಾರಿ ಮೆಡಿಕಲ್
ಕಾಲೇಜ್ನಲ್ಲಿ ಶನಿವಾರ ಬೆಳಿಗ್ಗೆ ಕೆ.ಎಸ್.ಈಶ್ವರಪ್ಪ ಅಧ್ಯಕ್ಷತೆಯಲ್ಲಿ ಆಸ್ಪತ್ರೆ ಹಾಗೂ ಜಿಲ್ಲಾಡಳಿತದ ಪ್ರಮುಖ ಅಧಿಕಾರಿಗಳ ಸಭೆ ನಡೆಯಿತು.
ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಅಗತ್ಯ ಬೆಡ್, ವೆಂಟಿಲೇಟರ್,
ಆಕ್ಸಿಜನ್, ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ
ಸೂಚಿಸಿದ್ದಾರೆ.ಈಗಾಗಲೇ ಮೆಗ್ಗಾನ್ನಲ್ಲಿ 200 ಆಕ್ಸಿಜನ್ ಹಾಗೂ 22 ನಾನ್ ಆಕ್ಸಿಜನ್ ಬೆಡ್
ವ್ಯವಸ್ಥೆಯಿದೆ. ಆಕ್ಸಿಜನ್ ಬೆಡ್ ಗಳ ಸಂಖ್ಯೆಯನ್ನು 150 ಕ್ಕೆ ಹೆಚ್ಚಿಸಲು
ಸೂಚಿಸಲಾಯಿತು.ಗಂಭೀರ ಸ್ವರೂಪದ ರೋಗ ಲಕ್ಷಣ ಹೊಂದಿದವರಿಗೆ ಮೆಗ್ಗಾನ್ ನಲ್ಲಿ ಹಾಗೂ ಕಡಿಮೆ ರೋಗ
ಲಕ್ಷಣ ಹೊಂದಿದವರನ್ನು ಕೋವಿಡ್ ಕೇರ್ ಸೆಂಟರ್ ಹಾಗೂ ಗ್ರಾಮಾಂತರ ಪ್ರದೇಶಗಳಿಂದ
ಆಗಮಿಸುವವರಿಗೆ ಆಯಾ ಭಾಗದಲ್ಲಿ ಚಿಕಿತ್ಸೆ ಲಭ್ಯವಾಗುವ ವ್ಯವಸ್ಥೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಾಯಿತು.