ಬಿ.ಎಸ್.ವೈ. ಗುಣಮುಖರಾಗಲಿ : ಈಶ್ವರಪ್ಪ ಹಾರೈಕೆ

ಶಿವಮೊಗ್ಗ, ಏ. ೧೭: ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ಶೀಘ್ರ ಗುಣಮುಖರಾಗಲಿ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಪ್ರಾರ್ಥಿಸಿದ್ದಾರೆ.

ಶನಿವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯದ ಏಳ್ಗೆಗೆ ನಿರಂತರವಾಗಿ ಶ್ರಮಿಸಿಸುತ್ತಿರುವ ಯಡಿಯೂರಪ್ಪರವರು, ಶೀಘ್ರ ಗುಣಮುಖರಾಗಿ ಮತ್ತೆ ಜನಸೇವೆಗೆ ಮರಳುವಂತಾಗಲಿ ಎಂದು ಹೇಳಿದ್ದಾರೆ.

ಸಭೆ: ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆ ಎದುರಿಸುವ ಕುರಿತಂತೆ ಸಕರ್?ರಿ ಮೆಡಿಕಲ್ ಕಾಲೇಜ್ನಲ್ಲಿ ಶನಿವಾರ ಬೆಳಿಗ್ಗೆ ಕೆ.ಎಸ್.ಈಶ್ವರಪ್ಪ ಅಧ್ಯಕ್ಷತೆಯಲ್ಲಿ ಆಸ್ಪತ್ರೆ ಹಾಗೂ ಜಿಲ್ಲಾಡಳಿತದ ಪ್ರಮುಖ ಅಧಿಕಾರಿಗಳ ಸಭೆ ನಡೆಯಿತು.
ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಅಗತ್ಯ ಬೆಡ್, ವೆಂಟಿಲೇಟರ್, ಆಕ್ಸಿಜನ್, ಆ?ಯಂಬುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈಗಾಗಲೇ ಮೆಗ್ಗಾನ್ ಆಸ್ಪತ್ರೆಯಲ್ಲಿ ೨೦೦ ಆಕ್ಸಿಜನ್ ಹಾಗೂ ೨೨ ನಾನ್ ಆಕ್ಸಿಜನ್ ಬೆಡ್ ವ್ಯವಸ್ಥೆಯಿದೆ. ಆಕ್ಸಿಜನ್ ಬೆಡ್ ಗಳ ಸಂಖ್ಯೆಯನ್ನು ೧೫೦ ಕ್ಕೆ ಹೆಚ್ಚಿಸಲು ಸೂಚಿಸಲಾಯಿತು.

ಗಂಭೀರ ಸ್ವರೂಪದ ರೋಗ ಲಕ್ಷಣ ಹೊಂದಿದವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಹಾಗೂ ಕಡಿಮೆ ರೋಗ ಲಕ್ಷಣ ಹೊಂದಿದವರನ್ನು ಕೋವಿಡ್ ಕೇರ್ ಸೆಂಟರ್ ಹಾಗೂ ಗ್ರಾಮಾಂತರ ಪ್ರದೇಶಗಳಿಂದ ಆಗಮಿಸುವವರಿಗೆ ಆಯಾ ಭಾಗದಲ್ಲಿ ಚಿಕಿತ್ಸೆ ಲಭ್ಯವಾಗುವ ವ್ಯವಸ್ಥೆ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಶಿವಮೊಗ್ಗ ನಗರದ ಸಕರ್?ರಿ ಮೆಡಿಕಲ್ ಕಾಲೇಜ್ ಸಭಾಂಗಣದಲ್ಲಿ ಶನಿವಾರ ಕೋವಿಡ್-೧೯ ಕ್ಕೆ ಸಂಬಂಧಿಸಿದ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧ್ಯಕ್ಷತೆಯಲ್ಲಿ
ಜರುಗಿತು.)