ಬಿ.ಕೆ. ಹರಿಪ್ರಸಾದ, ಶಾಸಕ ಯತ್ನಾಳ ವಿರುದ್ಧ ಮಾಜಿ ಸಚಿವ ಬಿ.ಸಿ. ಪಾಟೀಲ ವಾಗ್ದಾಳಿ

ವಿಜಯಪುರ, ಡಿ.26:ವಿಜಯಪುರ ನಗರ ಕ್ಷೇತ್ರದ ಸ್ವಪಕೀಯ ಶಾಸಕ ಯತ್ನಾಳ ಹಾಗೂ ಕಾಂಗ್ರೆಸ್ಸಿನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ವಿರುದ್ಧ ಮಾಜಿ ಸಚಿವ ಬಿ.ಸಿ. ಪಾಟೀಲ್ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ವಿಕೃತ ಮನಸ್ಸುಗಳನ್ನು ಹೊಂದಿರುವಂತಹ ಬಿ.ಕೆ. ಹರಿಪ್ರಸಾದ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಇಬ್ಬರು ಸೇರಿ ಒಂದು ಪಕ್ಷವನ್ನು ಪ್ರಾರಂಭಿಸುವುದು ಒಳ್ಳೆಯದು ಅಂತ ನನ್ನ ಭಾವನೆ
ಎಂದು ಬಿ.ಸಿ. ಪಾಟೀಲ ಮಾಡಿದ್ದಾರೆ.
ತಮ್ಮ ಸ್ವಂತ ಕ್ಷೇತ್ರದ ಬಗ್ಗೆ ಯೋಚನೆ ಮಾಡಿ, ಪಕ್ಷದ ಬಗ್ಗೆ ಆಮೇಲೆ ಯೋಚಿಸಬಹುದು
ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಟ್ವೀಟ್ ಮೂಲಕವೇ ಬಿ.ಸಿ. ಪಾಟೀಲರ ಟ್ವೀಟ್ ಗೆ ಪ್ರತಿಯಾಗಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.