ಬಿ.ಜೆ.ಪಿ ಎಸ್.ಸಿ. ಮೋರ್ಚಾ ಕಾರ್ಯಕಾರಿಣಿ ಸಭೆ

????????????????????????????????????

ಸಂಜೆವಾಣಿ ವಾರ್ತೆ
ಸಿರುಗುಪ್ಪ ನ 15 : ನಗರದ ಬಿಜೆಪಿ ಕಚೇರಿಯಲ್ಲಿ ನಡೆದತಾಲೂಕು ಬಿಜೆಪಿ ಎಸ್ ಸಿ ಮೋರ್ಚಾ ಕಾರ್ಯಕಾರಿಣಿ ಸಭೆಗೆ ಶಾಸಕ ಎಂ ಎಸ್ ಸೋಮಲಿಂಗಪ್ಪ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
 ನಂತರ ಮಾತನಾಡಿದ ಅವರು ಪಕ್ಷದ ಸಂಘಟನೆಗಾಗಿ ಕಾರ್ಯಕರ್ತರನ್ನು ಹುರಿದುಂಬಿಸುವುದೇ ಕಾರ್ಯಕಾರಿಣಿಯ ಉದ್ದೇಶವಾಗಿದೆ.
  ಸ್ವಾತಂತ್ರ್ಯಾನಂತರದ ದೇಶದ ಹಿತವನ್ನು ಕಾಪಾಡಲು ಹಾಗೂ ಡಾ.ಬಿ.ಆರ್  ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಕಾನೂನಿನಡಿಯಲ್ಲಿ  ಸಮಗ್ರ ದೇಶದ ಎಲ್ಲಾ ಬಡವ ದೀನದಲಿತರಿಗೆ ಶೈಕ್ಷಣಿಕ ಸಾಮಾಜಿಕ ಆರ್ಥಿಕ ಹಾಗೂ ರಾಜಕೀಯ ಪ್ರಾಮುಖ್ಯತೆ ದೊರೆಯಬೇಕೆಂಬ ಉದ್ದೇಶದಿಂದ ದೀನ ದಯಾಳ್ ಉಪಾಧ್ಯಾಯ ಅವರು 1980ರಲ್ಲಿ ಪಕ್ಷ ಸ್ಥಾಪನೆ ಮಾಡಿ ಕೇವಲ ಹತ್ತು ವರ್ಷಗಳಲ್ಲಿ ಶಿಸ್ತಿನೊಂದಿಗೆ ಪಕ್ಷ ಸಂಘಟಿಸಿದ ಅಟಲ್ ಬಿಹಾರಿ ವಾಜಪೇಯಿ ಅವರು ದೇಶದ ಪ್ರಧಾನ ಮಂತ್ರಿಯಾದರು.
  ಇಂದಿನ ದಿನಗಳಲ್ಲಿ ಆಡಳಿತವಿಲ್ಲದೇ ಪರಿತಪಿಸುತ್ತಿರುವ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಕೊರತೆ ಎದ್ದು ಕಾಣುತ್ತಿದ್ದು ದೇಶದಲ್ಲಿ ಉತ್ತಮ ಆಡಳಿತ ನೀಡುತ್ತಿರುವ ಪ್ರಧಾನಮಂತ್ರಿ ಹಾಗೂ ರಾಜ್ಯದ ಮುಖ್ಯಮಂತ್ರಿಗಳ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದನ್ನು ನಾವೆಲ್ಲರೂ ಒಗ್ಗಟ್ಟಿನಿಂದ ರಾಷ್ಟ್ರ ಮತ್ತು ರಾಜ್ಯದಲ್ಲಿ ನಮ್ಮ ಪಕ್ಷದ ಆಡಳಿತದಲ್ಲಾದ ಅಭಿವೃದ್ಧಿ ಕಾರ್ಯಗಳನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲಕ ಅವರ ಆರೋಪಗಳನ್ನು ಅಲ್ಲಗೆಳೆಯೋಣ.
  ತಾಲೂಕಿನ ಎಲ್ಲಾ ಹಿರಿಯ ಮತ್ತು ವಿದ್ಯಾವಂತ ಯುವಕರ ಸಂಘಟನೆಯಲ್ಲಿ ಸೇರಿಸಿ ಮುಂಬರುವ ಚುನಾವಣೆಗಳನ್ನು ಎದುರಿಸು ವುದರೊಂದಿಗೆ ಪಕ್ಷದ ಏಳಿಗೆಗಾಗಿ ಶ್ರಮಿಸೋಣ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಪಂಪನಗೌಡ ಎಸ್.ಸಿ.ಮೋರ್ಚಾದ ಅಧ್ಯಕ್ಷ ದಿಗಂಬರ ಸ್ವಾಮಿ, ನಗರಸಭೆ ಸದಸ್ಯ ಮೇಕೇಲಿ ವೀರೇಶ, ರಾಮಕೃಷ್ಣ, ಮುಖಂಡರಾದ ಮಲ್ಲಿಕಾರ್ಜುನ, ಗಂಗಣ್ಣ, ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಕಾರ್ಯಕರ್ತರು ಇದ್ದರು.
14-ಸಿರುಗುಪ್ಪ-1 : ನಗರದ ಬಿಜೆಪಿ ಕಚೇರಿಯಲ್ಲಿ ನಡೆದತಾಲೂಕು ಬಿಜೆಪಿ ಎಸ್ ಸಿ ಮೋರ್ಚಾ ಕಾರ್ಯಕಾರಿಣಿ ಸಭೆಗೆ ಶಾಸಕ ಎಂ ಎಸ್ ಸೋಮಲಿಂಗಪ್ಪ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.