ಬಿ.ವಿ.ನಾಯಕ ಪರ ಸುದೀಪ್ ರೋಡ್ ಶೋ

ಮಾನ್ವಿ,ಮೇ.೦೫- ರಾಜ್ಯ ವಿಧಾನಸಭಾ ಚುನಾವಣೆ ಪ್ರಚಾರ ಆರಂಭವಾಗಿರು ಹಿನ್ನೆಲೆಯಲ್ಲಿ ಮಾನ್ವಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವಿ.ನಾಯಕ ಪರ ಪ್ರಚಾರ ಮಾಡಿದ ಚಿತ್ರ ನಟ ಸುದೀಪ್ ರೋಡ್ ಶೋ ನಡೆಸಿ ಭರ್ಜರಿ ಪ್ರಚಾರ ಮಾಡುವುದರ ಮೂಲಕ ಬಿಜೆಪಿ ಅಭ್ಯರ್ಥಿ ಬಿ.ವಿ.ನಾಯಕಪರವಾಗಿ ಮತಯಾಚನೆ ಮಾಡಿದರು.
ತಾಲ್ಲೂಕಿನಲ್ಲಿ ತಮ್ಮದೇ ಆದ ಅಭಿಮಾನಿಗಳ ಬಳಗ ಹೊಂದಿರುವ ನಟ ಸುದೀಪ್ ಆಗಮಿಸುತ್ತಿದ್ದಂತೆ ರಸ್ತೆಗಳ ಉದ್ದಕ್ಕೂ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು ಕೇಕೆಯ ಮೂಲಕ ಜಯಗೋಷಣೆ ಕೂಗಿದರು ಜೊತೆಗೆ ಸಣ್ಣ ಪುಟ್ಟ ಅಹಿತಕರ ಘಟನೆಗಳು ನಡೆದು ಹಲವರಿಗೆ ಸಣ್ಣ ಪುಟ್ಟ ಗಾಯಗಳಾದವು.
ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಶ್ರೀ ವಾಲ್ಮೀಕಿ ಮಹರ್ಷಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ಬಸವೃತ್ತದವರೆಗೆ ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಆಗಮಿಸಿನಂತರ ಮಾತಾನಾಡಿ ಅವರು ಬಿ.ವಿ.ನಾಯಕರಿಗೆ ಮತ ನೀಡಿದರೆ ಮೋದಿಯವರಿಗೆ ಮತ ನೀಡಿದಂತೆ ಬಿಜೆಪಿಗೆ ಮತ ನೀಡುವುದರಿಂದ ಕ್ಷೇತ್ರದ ಅಭಿವೃದ್ಧಿ ಸಾಧ್ಯ ನಾನು ಬಸವರಾಜ ಬೊಮ್ಮಯಿ, ಯಡಿಯೂರಪ್ಪ, ಮೋದಿ, ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದರು..
ಈ ಸಂಧರ್ಭದಲ್ಲಿ ಅಭ್ಯರ್ಥಿ ಬಿ.ವಿ.ನಾಯಕ, ಮಾಜಿ ಶಾಸಕ ಗಂಗಾಧರ ನಾಯಕ, ಬಸನಗೌಡ ಬ್ಯಾಗವಾಟ, ಶರಣಪ್ಪಗೌಡ, ತಿಮ್ಮರೆಡ್ಡಿ, ಅರುಣ್ ಚಂದಾ ಸೇರಿದಂತೆ ಸಾವಿರಾರು ಬಿಜೆಪಿ ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.