ಬಿ.ವಿ.ಬಿ ಕಾಲೇಜಿನಲ್ಲಿ ಸಸಿ ನೆಡುವ ಕಾರ್ಯಕ್ರಮ

ಬೀದರ್:ಆ.1: ಹೈ.ಕ.ಶಿ. ಸಂಸ್ಥೆಯ ಬಿ.ವಿ. ಭೂಮರಡ್ಡಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯ, ಬಿ.ವಿ. ಭೂಮರಡ್ಡಿ ಪದವಿ ಪೂರ್ವ ಮಹಾವಿದ್ಯಾಲಯ, ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ, ಶ್ರೀ ಶರಣಬಸವೇಶ್ವರ ಅಭ್ಯಾಸಾರ್ಥ ಪ್ರೌಢ ಶಾಲೆ, ನ್ಯಾಶನಲ್ ಇಂಗ್ಲೀಷ ಮಿಡಿಯಮ್ ಪಬ್ಲಿಕ್ ಸ್ಕೂಲ ಬೀದರ ಇವರುಗಳ ಸಂಯುಕ್ತಾಶ್ರಯದಲ್ಲಿ ಹೈ.ಕ.ಶಿ. ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ದಿ: ಮಹಾದೇವಪ್ಪಾ ರಾಂಪೂರೆಯವರ ಜನ್ಮ ಶತಮಾನೋತ್ಸವದ ಅಂಗವಾಗಿ ಮಹಾವಿದ್ಯಾಲಯದ ಆವರಣದಲ್ಲಿ 100 ಸಸಿಗಳನ್ನು ನೆಡುವುದರ ಮೂಲಕ ಅರ್ಥಪೂರ್ಣವಾಗಿ ಜನ್ಮ ಶತಮಾನೋತ್ಸವವಕ್ಕೆ ಚಾಲನೆ ನೀಡಲಾಯಿತು.

ಪ್ರಜಾಪಿತಾ ಬ್ರಹ್ಮಾಕುಮಾರಿ ಈಶ್ವರಿಯ ವಿಶ್ವವವಿದ್ಯಾಲಯದ ಸಹೋದರಿಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿ.ವಿ. ಭೂಮರಡ್ಡಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಪಿ. ವಿಠ್ಠಲ ರಡ್ಡಿ, ಬಿ.ವಿ. ಭೂಮರಡ್ಡಿ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮದಲ್ಲಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ದೀಪಾ ರಾಗಾ, ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಮಲ್ಲಿಕಾರ್ಜುನ ಕನಕಟ್ಟೆ, ಶ್ರೀ ಶರಣಬಸವೇಶ್ವರ ಅಭ್ಯಾಸಾರ್ಥ ಪ್ರೌಢ ಶಾಲೆಯ ಮುಖ್ಯೋಪಧ್ಯಾಯರಾದ ಶೀಲಾ, ನ್ಯಾಶನಲ್ ಇಂಗ್ಲೀಷ ಮಿಡಿಯಮ್ ಪಬ್ಲಿಕ್ ಸ್ಕೂಲನ ಪ್ರಾಂಶುಪಾಲರಾದ ಶೀಲತಾ ಹಾಗೂ ಮಹಾವಿದ್ಯಾಲಯದ ಎನ್.ಸಿ.ಸಿ. ಎನ್.ಎಸ್.ಎಸ್. ಯುತ್ ರೆಡ್ಡ್ ಕ್ರಾಸ್, ಸ್ಕೌಟ್ ಮತ್ತು ಗೈಡ್ಸ್ ಸ್ವಯಂ ಸೇವಕರು ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯವರು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಮಹಾವಿದ್ಯಾಲಯದ ಸಿಬ್ಬಂದಿ ಕಾರ್ಯದರ್ಶಿ ಡಾ. ಹಣಮಂತಪ್ಪ ಬಿ. ಸೇಡಂಕರ ಕಾರ್ಯಕ್ರಮ ನಿರ್ವಹಿಸಿದರು.