ಬೀದರ,- ನಗರದ ಹೈ.ಕ.ಶಿ. ಸಂಸ್ಥೆಯ ಬಿ.ವಿ. ಭೂಮರಡ್ಡಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗ ಹಾಗೂ ಯುವ ರೆಡ್‍ಕ್ರಾಸ್ ಘಟಕವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಯುವರೆಡ್‍ಕ್ರಾಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ಹಣಮಂತಪ್ಪ ಬಿ. ಸೇಡಂಕರ ಅವರು ವಿಶೇಷ ಉಪನ್ಯಾಸ ನೀಡುತ್ತಾ ತಂಬಾಕು ಸೇವನೆಯಿಂದಾಗುವ ಹಾನಿಯನ್ನು ಕುರಿತು ಜಾಗೃತಿ ಮೂಡಿಸುತ್ತಾ ತಂಬಾಕು ಸೇವನೆಯಿಂದ ಪ್ರತಿವರ್ಷ ಜಗತ್ತಿನಾದ್ಯಂತ 80 ಲಕ್ಷ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದು, ಯುವಕರು ವಿದ್ಯಾರ್ಥಿಗಳು ತಂಬಾಕು ಬಳಕೆಯ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಿಕೊಳ್ಳಬೇಕಾಗಿದ್ದು ತಾವು ಜಾಗೃತರಾಗಿ ಸಮಾಜವನ್ನು ಜಾಗೃತಗೊಳಿಸುವುದು ಅವಶ್ಯಕ. ತಂಬಾಕು ಹಾಗೂ ದುಶ್ಚಟಗಳನ್ನು ತ್ಯಾಜಿಸಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಮುಖ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಶ್ರೀ ಅನೀಲಕುಮಾರ ಅಣದೂರೆಯವರು ತಂಬಾಕನ್ನು ಯಾವುದೇ ರೀತಿಯಲ್ಲಿ ಬಳಸಿದರೂ ಅದು ಆರೋಗ್ಯಕ್ಕೆ ಹಾನಿಕಾರಕವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಪಿ. ವಿಠ್ಠಲ ರಡ್ಡಿ ತಂಬಾಕು ಮುಕ್ತ ದಿನಾಚರಣೆಯ ಈ ವರ್ಷದ ದೈಯವಾದ “ನಮಗೆ ಆಹಾರ ಬೇಕು ತಂಬಾಕಲ್ಲ” ಎಂಬುವುದನ್ನು ವಿವರಿಸುತ್ತಾ ತಂಬಾಕು ಬಳಕೆಯ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಂಡು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವನ್ನು ನಿಷೇಧಗೊಳಿಸಲಾಗಿದೆ ಅಲ್ಲದೇ ಉಲ್ಲಂಘನೆಗೆ ದಂಡವನ್ನು ವಿಧಸಲಾಗುತ್ತದೆ ಎಂದು ತಿಳಿಸಿದ ಅವರು ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಅನೇಕ ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ವಿಶ್ವದಾದ್ಯಂತ ಈ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಕು: ನಾಗಲಾಂಬಿಕೆ ಬಿ.ಎಸ್ಸಿ.2 ಸೆಮಿಸ್ಟರ ವಿದ್ಯಾರ್ಥಿನಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಶ್ರೀ ಶಿವರಾಜ ಜಿ. ಮಠ ಪ್ರಾಧ್ಯಾಪಕರು ಸ್ವಾಗತಿಸಿದರು ಶ್ರೀ ನೀಲಕಂಠ ಪ್ರಾಧ್ಯಾಪಕರು ವಂದಿಸಿದರು ಶ್ರೀ ಬಸವರಾಜ ಬಿರಾದಾರ ಉಪನ್ಯಾಸಕರು ಕಾರ್ಯಕ್ರಮವನ್ನು ನಿರೂಪಸಿದರು.
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಜರಿದ್ದರು.