ಬಿ.ವಿ. ಭೂಮರಡ್ಡಿ ಪದವಿ ಮಹಾವಿದ್ಯಾಲಯದಲ್ಲಿ ಅಗಷ್ಟ್ ಕೋಮ್ಟ್‍ರವರ 225ನೇ ಜನ್ಮದಿನೋತ್ಸವ

ಬೀದರ : ಜ.20: ಹೈ.ಕ.ಶಿ. ಸಂಸ್ಥೆಯ ಬಿ.ವಿ. ಭೂವiರಡ್ಡಿ ಪದವಿ ಮಹಾವಿದ್ಯಾಲಯದಲ್ಲಿ ಸಮಾಜಶಾಸ್ತ್ರದ ವಿಭಾಗದಿಂದ ಅಗಷ್ಟ್ ಕೋಮ್ಟ್‍ರವರ 225ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಪಿ. ವಿಠ್ಠಲ ರಡ್ಡಿಯವರು ಸಮಾಜಶಾಸ್ತ್ರವು ಇಂದು ಎಂದೆಂದಿಗಿಂತಲೂ ಹೆಚ್ಚು ಅವಶ್ಯಕವಾಗಿದ್ದು ಓದಿಗಾಗಿ ಮಾತ್ರವೇ ಸೀಮಿತವಾಗಿರದೆ ಅದು ಉದ್ಯೋಗಾವಕಾಶಗಳನ್ನು ಪಡೆಯಲು ಮತ್ತು ಸಂಶೋಧನೆಗಳನ್ನು ಮಾಡಲು ಪ್ರೇರೇಪಿಸುತ್ತದೆ. ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ, ಸಮಾಜಿಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ, ಅಭಿವೃದ್ಧಿದಾಯಕ ಯೋಜನೆಗಳನ್ನು ರೂಪಿಸುವಲ್ಲಿ ಸಮಾಜಶಾಸ್ತ್ರ ಮಹತ್ವದ ಕಾರ್ಯ ನಿರ್ವಹಿಸುತ್ತದೆಂದು ಅಭಿಪ್ರಾಯಪಟ್ಟುರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾಡನಾಡಿದ ಉಪ ಪ್ರಾಂಶುಪಾಲರಾದ ಶ್ರೀ ಅನೀಲಕುಮಾರ ಅಣದೂರೆಯವರು, ಸಮಾಜಶಾಸ್ತ್ರವು ಸಮಾಜದ ಐಕ್ಯತೆ ಹಾಗೂ ಭದ್ರತೆಯನ್ನು ಕಾಪಾಡುವುದರೊಂದಿಗೆ ರಾಷ್ಟ್ರೀಯ ಐಕ್ಯತೆಗೆ ಸಹಕಾರಿಯಾಗಿದೆ. ಸಮಾಜದಲ್ಲಿ ಮೌಲ್ಯ ಶಿಕ್ಷಣವನ್ನು ಬೆಳಸುವುದರೊಂದಿಗೆ ಶಾಂತಿ, ಸಹಬಾಳ್ವೆ, ಮಾನವೀಯ ಮೌಲ್ಯಗಳನ್ನು ಬೆಳಸುತ್ತದೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಹಣಮಂತಪ್ಪ ಬಿ. ಸೇಡಂಕರ ಅವರು ಸಮಾಜವನ್ನು ವೈಜ್ಞಾನಿಕವಾಗಿ ಅಧ್ಯಾಯನ ಮಾಡಲು ಪ್ರೇರೆಪಿಸಿ ಸಮಾಜಶಾಸ್ತ್ರವನ್ನು ಪ್ರತ್ಯೇಕವಾದ ಅಧ್ಯಯನಶಾಸ್ತ್ರವನ್ನಾಗಿ ಮಾಡಿದ ಕೀರ್ತಿ ಸಮಾಜಶಾಸ್ತ್ರದ ಪೀತಾಮಹರಾದ ಅಗಷ್ಟ್ ಕೋಮ್ಟ್‍ರವರಿಗೆ ಸಲ್ಲುತ್ತದೆ ಎಂದು ಅಭಿಪ್ರಾಯಪಟ್ಟರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಇತಿಹಾಸ ವಿಭಾಗದ ಮುಖ್ಯಸ್ಥರಾದ ಶ್ರೀ ಶಿವರಾಜ ಜಿ. ಮಠರವರು ಉಪಸ್ಥಿತರಿದ್ದರು.