ಬಿ.ವೆಂಕಟೇಶ್ ಪ್ರಸಾದ್ ಅವರಿಗೆ ಕಾಂಗ್ರೆಸ್ ನಲ್ಲಿ ಎಂಪಿ ಟಿಕೇಟ್ ನೀಡಲು ಸಂಗನಕಲ್ಲು ಹೆಚ್. ಡ.ವಿಜಯ್ ಕುಮಾರ್ ಮನವಿ


ಸಂಜೆವಾಣಿ ವಾರ್ತೆ
ಬಳ್ಳಾರಿ,ಫೆ.09  : ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸಂಗನಕಲ್ಲು ಗ್ರಾಮದ ಕಾಂಗ್ರೆಸ್ ಯುವ ಮುಖಂಡ ಸಂಗನಕಲ್ಲು ಹೆಚ್.ಡಿ.ವಿಜಯ್ ಕುಮಾರ್ ಮತ್ತು ಅವರ ಅಭಿಮಾನಿ ಬಳಗದವರು 2024 ರಲ್ಲಿ ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ರಾಜ್ಯದ ಯುವ ನಾಯಕರಾದ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ರವರ ಪ್ರೀತಿಯ ಸಹೋದರ ವೆಂಕಟೇಶ್ ಪ್ರಸಾದ್ ಅವರಿಗೆ ಅಖಂಡ ಬಳ್ಳಾರಿ ಜಿಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೇಟ್ ನೀಡಬೇಕೆಂದು ರಾಜ್ಯ ಮತ್ತು ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ನಾಯಕರಿಗೆ, ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಗೆ ಮತ್ತು ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರಿಗೆ ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರಿಗೆ, ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವರ್ಕಿಂಗ್ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ಸೈಯದ್ ನಾಸಿರ್ ಹುಸೇನ್ ರವರಿಗೆ ಹಾಗೂ ಬಳ್ಳಾರಿ ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರುಗಳಾದ ಅಲ್ಲಂ ವೀರಭದ್ರಪ್ಪ, ಕೆ.ಸಿ.ಕೊಂಡಯ್ಯ ರವರಿಗೆ, ಕಾಂಗ್ರೆಸ್ ಪಕ್ಷದ ರಾಜ್ಯ ಮುಖಂಡರುಗಳಾದ ಜೆ.ಎಸ್.ಆಂಜನೇಯಲು, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಜಿ.ಮಹಮದ್ ರಫೀಕ್ ಅವರಿಗೆ, ಬಳ್ಳಾರಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಬಿ.ಮುಂಡರಗಿ ನಾಗರಾಜ್ ಅವರಿಗೆ ಮತ್ತು ಕಂಪ್ಲಿ, ಸಂಡೂರು, ಸಿರುಗುಪ್ಪ ಮತ್ತು ನಗರ ಕ್ಷೇತ್ರದ ಶಾಸಕರುಗಳಿಗೆ ಮನವಿ ಮಾಡಿದ್ದಾರೆ.
ಅಖಂಡ ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಬಿ.ವೆಂಕಟೇಶ್ ಪ್ರಸಾದ್ ಅವರು ನ್ಯಾಷನಲ್ ಇನ್ಸ್ ಟಿಟ್ಯೂಷನ್ ಟೆಕ್ನಾಲಜಿ ಆಫ್ ಕರ್ನಾಟಕ – ಸೂರತ್ಕಲ್ ನಲ್ಲಿ ಇಂಜಿನಿಯರಿಂಗ್ ಪದವಿ ಪಡೆದು ಕರ್ನಾಟಕ ನೀರಾವರಿ ಇಲಾಖೆಯಲ್ಲಿ ಉದ್ಯೋಗವನ್ನು ಪಡೆದು ಸುಮಾರು 22 ವರ್ಷಗಳಿಂದ ಎ.ಇ.ಇ ಯಾಗಿ ಉತ್ತರ ಕರ್ನಾಟಕದ ಹಲವಾರು ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸಿ ಇವರು ಜನಪ್ರತಿನಿಧಿಯಾಗಲು ಇಚ್ಚಿಸಿ ಸರ್ಕಾರಿ ಹುದ್ದೆಯಿಂದ ನಿವೃತ್ತಿಯನ್ನು ಪಡೆದು ರಾಜಕೀಯದಲ್ಲಿ ಧುಮುಕಿ ಜನರ ಜೊತೆ ಬೆರೆತು ಜನ ಸೇವೆ ಮಾಡುವಲ್ಲಿ ಯಶಸ್ವಿಯಾಗುತ್ತಿದ್ದಾರೆ.
ಕಾಂಗ್ರೆಸ್ ಹಿರಿಯ ಮುಖಂಡ ಬಿ.ವೆಂಕಟೇಶ್ ಪ್ರಸಾದ್ ಅವರಿಗೆ ಟಿಕೆಟ್ ನೀಡಬೇಕೆಂದು ಪತ್ರಿಕೆಯ ಮಾದ್ಯಮದ ಮೂಲಕ ಮನವಿ ಮಾಡಿದ್ದಾರೆ.