ಬೀದರ್‍ಗೆ ನಾಳೆ ಪ್ರಿಯಾಂಕಾ ಗಾಂಧಿ

ಬೀದರ್:ಮೇ.2: ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಜಿಲ್ಲೆಗೆ ಮೇ 3 ರಂದು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬರಲಿದ್ದಾರೆ.

ಮೇ 3 ರಂದು ಮಧ್ಯಾಹ್ನ 3ಕ್ಕೆ ಪ್ರಿಯಾಂಕಾ ಗಾಂಧಿ ಅವರು ಬೀದರ್ ತಾಲ್ಲೂಕಿನ ಬಗದಲ್‍ನ ಮೋರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುವರು. ಎಐಐಸಿ ಕಾರ್ಯದರ್ಶಿ ಶ್ರೀಧರ ಬಾಬು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಪಾಲ್ಗೊಳ್ಳಲಿದ್ದಾರೆ.

ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮತದಾರರು ಪ್ರಚಾರ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ಮನವಿ ಮಾಡಿದ್ದಾರೆ.