ಬೀದರ್ ಉತ್ಸವದ ಸಮಾರೋಪಕ್ಕೆ ಸಿಎಂ ಆಗಮನ

ಬೀದರ್: ಜ.6:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ 9ರಂದು ನಡೆಯಲಿರುವ ಬೀದರ್ ಉತ್ಸವದ ಸಮಾರೋಪ ಸಮಾರಂಭಕ್ಕೆ ಬರಲು ಒಪ್ಪಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಬೀದರ್ ಉತ್ಸವದ ಉದ್ಘಾಟನೆಗೆ ಬರುವಂತೆ ಆಹ್ವಾನ ಪತ್ರಿಕೆ ನೀಡಿತು.

ಕಾರ್ಯಕ್ರಮಗಳ ಒತ್ತಡ ಇರುವ ಕಾರಣ ಮುಖ್ಯಮಂತ್ರಿ ಅವರು ಉತ್ಸವದ ಕೊನೆಯ ದಿನ ಬರುವ ಭರವಸೆ ನೀಡಿದರು.

ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ರಾಜ್ಯ ಮರಾಠಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಜಿ.ಮುಳೆ, ರಾಜ್ಯ ಹಜ್ ಕಮಿಟಿ ಅಧ್ಯಕ್ಷ ರೌಫೆÇೀದ್ದಿನ್ ಕಚೇರಿವಾಲೆ, ಬುಡಾ ಅಧ್ಯಕ್ಷ ಬಾಬು ವಾಲಿ ಹಾಗೂ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಇದ್ದರು.