ಬೀದರ್ ಕೀರ್ತಿ ವಿಶ್ವಮಟ್ಟದಲ್ಲಿ ಹೆಚ್ಚಿಸಿ: ಚವ್ಹಾಣ

ಬೀದರ: sಸೆ.18:ಪಶುಸಂಗೋಪನೆ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಬಿಡುವಿಲ್ಲದ ಕಾರ್ಯಕ್ರಮಗಳ ಮಧ್ಯೆಯೇ ಸೆಪ್ಟೆಂಬರ್ 17ರಂದು ಬ್ರಿಮ್ಸ್ ಕಾಲೇಜಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ವೈದ್ಯಕೀಯ ಕೋರ್ಸಗಳ ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಮಾತನಾಡಿದರು.
‘ಸರಿಯಾಗಿ ಓದಬೇಕು. ಬೀದರ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಹೆಚ್ಚಿಸಬೇಕು’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಸಚಿವರು, ಇದೆ ವೇಳೆ ವಿದ್ಯಾರ್ಥಿಗಳ ಅಹವಾಲನ್ನು ಕೂಡ ಆಲಿಸಿದರು. ಬ್ರಿಮ್ಸನಲ್ಲಿ ಓದುವ ಎಲ್ಲ ವಿದ್ಯಾರ್ಥಿಗಳಿಗು ಕೂಡ ಗುಣಮಟ್ಟದ ಶಿಕ್ಷಣ ಮತ್ತು ಇನ್ನೀತರ ಸೌಕರ್ಯ ನೀಡಬೇಕು ಎಂದು ಬ್ರಿಮ್ಸ್ ನಿರ್ದೇಶಕರಾದ ಡಾ.ಚಂದ್ರಕಾಂತ ಚಿಲ್ಲರಗಿ ಅವರಿಗೆ ಸಚಿವರು ನಿರ್ದೇಶನ ನೀಡಿದರು.
ಇದಕ್ಕು ಮೊದಲು ಸಚಿವರು, ಎಸ್ಸಿಪಿ ಮತ್ತು ಟಿಎಸ್‍ಪಿ ಯೋಜನೆಯಡಿಯಲ್ಲಿ ಇದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿದರು. ಅಶೋಕ ಪಿ.ಬಿ. ನಿರೂಪಿಸಿದರು.