ಬೀದರ್ ಜಿಲ್ಲೆಗೆ ಬಂಪರ್ ಕೊಡುಗೆ

ಬೀದರ್:ಮೇ.28: ರಾಜ್ಯದ ಕಾಂಗ್ರೆಸ್ ಸರ್ಕಾರವು ಸಚಿವ ಸಂಪುಟದಲ್ಲಿ ಜಿಲ್ಲೆಯ ಇಬ್ಬರು ಶಾಸಕರಿಗೆ ಸ್ಥಾನ ಕಲ್ಪಿಸುವ ಮೂಲಕ ಜಿಲ್ಲೆಗೆ ಬಂಪರ್ ಕೊಡುಗೆ ನೀಡಿದೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಎ. ಸಮಿ ತಿಳಿಸಿದ್ದಾರೆ.

ನಾಲ್ಕನೇ ಬಾರಿಗೆ ಆಯ್ಕೆಯಾಗಿರುವ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಹಾಗೂ ಬೀದರ್ ಶಾಸಕ ರಹೀಂಖಾನ್ ಅವರಿಗೆ ಸಚಿವ ಸ್ಥಾನ ಕೊಟ್ಟಿರುವುದು ಅತ್ಯಂತ ಸೂಕ್ತವಾಗಿದೆ ಎಂದು ಹೇಳಿದ್ದಾರೆ.

ಜಿಲ್ಲೆಯ ಇಬ್ಬರು ಸಚಿವರಾಗಿರುವ ಕಾರಣ ಜಿಲ್ಲೆಯ ಅಭಿವೃದ್ಧಿಗೆ ಹೊಸ ಆಯಾಮ ಸಿಗಲಿದೆ. ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ದೊರಕಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.