ಬೀದರ್ ತಾಲೂಕಿನ ಗ್ರಾಮಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಿ

ಬೀದರ್:ನ.11: ತಾಲ್ಲೂಕಿನ ಅನೇಕ ಗ್ರಾಮಗಳ ಬಡ ಕುಟುಂಬದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ನಿತ್ಯ ನಗರದ ಕಾಲೇಜುಗಳಿಗೆ ಬಂದು ಹೋಗುತ್ತಾರೆ. ಅವರಿಗೆ ಸಕಾಲದಲ್ಲಿ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ತೊಂದರೆ ಅನುಭವಿಸುತ್ತಿದ್ದಾರೆ. ಸರಿಯಾದ ಸಮಯಕ್ಕೆ ಬಸ್ ಓಡಿಸಲು ಕ್ರಮಕೈಗೊಳ್ಳಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ನಗರ ಘಟಕ ಆಗ್ರಹಿಸಿದೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಳಿಗ್ಗೆ ಹಳ್ಳಿಗಳಿಂದ ನಗರ ಪ್ರದೇಶದಕ್ಕೆ ಬಸ್‍ಗಳನ್ನು ಓಡಿಸಬೇಕು. ಇದರಿಂದ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಎಬಿವಿಪಿ ನಗರ ಕಾರ್ಯದರ್ಶಿ ಅಂಬ್ರೇಶ್ ಬಿರಾದಾರ, ನಗರ ಸಂಘಟನಾ ಕಾರ್ಯದರ್ಶಿ ಹೇಮಂತ, ಕಾರ್ಯಕರ್ತರಾದ ಶಶಿಕಾಂತ, ಓಂಕಾರ, ಪವನ, ಮಾರುತಿ, ವಿದ್ಯಾರ್ಥಿನಿಯರಾದ ಅಪೇಕ್ಷಾ, ಲಾವಣ್ಯ, ಶಿವಾನಿ, ಪ್ರಜ್ಞಾ ಇದ್ದರು.