ಬೀದರ್ ನಲ್ಲಿ ಅಂಬೇಡ್ಕರ್ ಜಯಂತಿ: ಭವ್ಯ ಮೆರವಣಿಗೆ

ಬೀದರ್:ಎ.14: ಡಾ.ಬಿ.ಆರ್ ಅಂಬೇಡ್ಕರ್ ಅವರ 132 ನೇ ಜಯಂತಿಯನ್ನು ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವದರಿಂದ ಇಂದು ಜಿಲ್ಲಾಡಳಿತ ಬೀದರ ವತಿಯಿಂದ ಸರಳವಾಗಿ ಆಚರಿಸಲಾಯಿತು. ಮೊದಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಪ್ಪು ನಮನ ಸಲ್ಲಿಸಿದ ಜಿಲ್ಲಾಧಿಕಾರಿ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳು ನಂತರ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರಮ ನಮನ ಸಲ್ಲಿಸಿದ ನಂತರ ಜಿಲ್ಲಾಧಿಕಾರಿಗಳು ಪಂಚ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪ ಎಮ್ ನೀಲಿ ಧಜಾರೋಹಣ ನೆರವೇರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಗಿರೀಶ್ ರಂಜೋಳಕರ. ಡಾ. ಬಿ.ಆರ್. ಅಂಬೇಡ್ಕರ್ 132 ನೇ ಜಯಂತಿ ಆಚರಣೆ ಸಮಿತಿ ಅಧ್ಯಕ್ಷ ಬಾಬುರಾವ್ ಪಾಸ್ವಾನ್. ಗೌರವ ಅಧ್ಯಕ್ಷ ಅನಿಲ ಕುಮಾರ ಬೆಲ್ದಾರ್. ಕಾರ್ಯಾಧ್ಯಕ್ಷ ಉಮೇಶ ಕುಮಾರ ಸ್ವಾರಳಕರ. ಪ್ರಧಾನ ಕಾರ್ಯದರ್ಶಿ ಮಹೇಶ ಗೋರನಾಳಕರ. ಖಜಾಂಚಿ ವಿನೋದಕುಮಾರ. ಸಮಾಜದ ಮುಖಂಡರಾದ ರಾಜಕುಮಾರ ಮೂಲ ಭಾರತಿ. ರಾಜಕುಮಾರ ಶೇರಿಕಾರ. ಅಶೋಕ ಮಾಳಗೆ. ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.