ಬೀದರ್ ವಸತಿ ಶಾಲೆಯ 16 ವಿದ್ಯಾರ್ಥಿಗಳಿಗೆ ಸೋಂಕು

ಬೀದರ್/ಕೊಪ್ಪಳ, ಜ.೧೫- ಬೀದರ್ ಜಿಲ್ಲೆಯ ಹುಮ್ನಾಬಾದ್‌ನಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ೧೬ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ವಕ್ಕರಿಸಿದೆ.
ಈ ಶಾಲೆಯ ೫ ವಿದ್ಯಾರ್ಥಿಗಳಿಗೆ ಸೋಂಕು ತಗುಲಿತ್ತು. ಹೀಗಾ ೧೪೦ ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ೧೬ ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.
ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದರಿಂದ ಕೆಲ ಮಕ್ಕಳನ್ನು ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಮತ್ತು ಕೆಲವು ವಿದ್ಯಾರ್ಥಿಗಳನ್ನು ಮನೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ.
ರಾಜ್ಯದಲ್ಲಿ ಶಾಲಾ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದು ಪೋಷಕರಲ್ಲಿ ಆತಂಕ ಮನೆಮಾಡುವಂತಾಗಿದೆ.
ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿರುವ ನವೋದಯ ವಿದ್ಯಾಲಯ ಹಾಗೂ ಬೀದರ್ ಜಿಲ್ಲೆಯ ಹುಮನಾಬಾದ್ ವಸತಿ ಶಾಲೆಯೊಂದರ ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.