ಬೀದರ ಜಿಲ್ಲಾ ಭಾಜಪಾ ಕಾರ್ಯಾಲಯದಲ್ಲಿ ಡಾ.ಬಿ.ಆರ್. ಅಂಬೇಡ್ಕರ ಜಯಂತಿ ಆಚರಣೆ

ಬೀದರ,ಏ.15: ನಗರದ ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ 132ನೇ ಜಯಂತಿಯನ್ನು ಆಚರಿಸಲಾಯಿತು. ಬೀದರ ಭಾಜಪಾ ಜಿಲ್ಲಾಧ್ಯಕ್ಷರಾದ ಶಿವಾನಂದ ಮಂಠಾಳಕರ ಅವರು ಡಾ.ಬಾಬಾಸಾಹೇಬ್ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿ ಜಿಲ್ಲಾಧ್ಯಕ್ಷರಾದ ಶಿವಾನಂದ ಮಂಠಾಳಕರ ಅವರು ಭಾಜಪಾ ಪಕ್ಷವನ್ನು ಡಾ.ಬಾಬಾಸಾಹೇಬ್ ಅಂಬೇಡ್ಕರ ಅವರ ತತ್ವವನ್ನು ಅನುಸರಿಸಿ ಎಲ್ಲಾ ಸಮುದಾಯಕ್ಕೆ ಪ್ರತಿನಿಧಿತ್ವ ನೀಡುತ್ತಿದೆ. ಇದೇ ಸಂದರ್ಭದಲ್ಲಿ ಬೀದರ ಜಿಲ್ಲಾ ಭಾಜಪಾ ಚುನಾವಣಾ ನಿರ್ವಹಣಾ ಸಮಿತಿಯ ಸಹ ಸಂಚಾಲಕರಾದ ರಾಜಶೇಖರ ನಾಗಮೂರ್ತಿಯವರು ಮಾತನಾಡಿ, ಡಾ. ಬಾಬಾ ಸಾಹೇಬ್ ಅಂಬೇಡ್ಕರ ತತ್ವ ಮತ್ತು ಸಿದ್ಧಾಂತವನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿದರೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಬೀದರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರಹಂತ ಸಾವಳೆ, ಎಸ್ಸಿ ಘಟಕದ ಜಿಲ್ಲಾಧ್ಯಕ್ಷರಾದ ಗಜೇಂದ್ರ ಕಾನಿತ್‍ಕರ್, ಮಹಿಳಾ ಮೋರ್ಚಾ ಅಧ್ಯಕ್ಷರಾದ ಲುಂಬಿನಿ ಗೌತಮ್, ವಿಜಯಲಕ್ಷ್ಮೀ ಕಾವಟಗೆ, ಭಾಜಪಾ ಮುಖಂಡರಾದ ರಾಜಕುಮಾರ ನೇಮತಾಬಾದ, ಬಸವರಾಜ ಪವಾರ, ಶ್ರೀನಿವಾಸ ಚೌಧರಿ, ಗುರುನಾಥ ಜಾಂತಿಕರ್, ಗಣೇಶ್ ಭೋಸ್ಲೆ, ಶ್ರೀಕಾಂತ ಮೋದಿ, ಶಶಿಧರ ಆನಂದ ಮಠ, ಬಸವರಾಜ ಜೋಜನಾ, ಗೋಪಾಲಕೃಷ್ಣ ಹಾಗೂ ಇನ್ನಿತರ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.