ಬೀದರ ಜಿಲ್ಲೆಯಲ್ಲಿ ಮೊದಲ ದಿನ 3 ಅಭ್ಯರ್ಥಿಗಳಿಂದ 4 ನಾಮಪತ್ರ ಸಲ್ಲಿಕೆ

ಬೀದರ. ಏ. 14: ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ – 2023 ರ ಬೀದರ ಜಿಲ್ಲೆಯ 06 ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೊದಲ ದಿನ ಸಲ್ಲಿಕೆಯಾದ ನಾಮಪತ್ರಗಳು ( 13-04-2023 ) 3 ಅಭ್ಯರ್ಥಿಗಳಿಂದ 4 ನಾಮಪತ್ರಗಳ ಸಲ್ಲಿಕೆಯಾಗಿವೆ. 48- ಹುಮನಾಬಾದ ವಿಧಾನ ಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜಶೇಖರ ಪಾಟೀಲ್ 2 ನಾಮಪತ್ರ ಸಲ್ಲಿಸಿದರು. 49- ಬೀದರ ( ದಕ್ಷಿಣ ) ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚಂದ್ರಸಿಂಗ್ ನಾಮಪತ್ರ ಸಲ್ಲಿಸಿದರು. 50- ಬೀದರ ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶಶಿಕುಮಾರ ಎಸ್. ಪಾಟೀಲ ನಾಮಪತ್ರ ಸಲ್ಲಿಸಿದರು. ಒಟ್ಟು ಮೂರು ಜನ ಅಭ್ಯರ್ಥಿಗಳಿಂದ ,ನಾಲ್ಕು ನಾಮ ಪತ್ರಗಳು ಸಲ್ಲಿಕೆಯಾದವು.

ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನವಾಗಿದ್ದು. ನಾಮ ಪತ್ರ ಪರಿಶೀಲನೆ ಏಪ್ರಿಲ್ 21 ರಂದು ನಡೆಯಲಿದೆ. ಉಮೇದುವಾರಿಕೆಯನ್ನು ಹಿಂಪಡೆಯಲು ಏಪ್ರಿಲ್ 24 ಕೊನೆಯ ದಿನಾಂಕವಾಗಿರುತ್ತದೆ. ಮೇ 10 ರಂದು ಮತದಾನ ನಡೆಯಲಿದ್ದು. ಮೇ 13 ರಂದು ಮತ ಏಣಿಕೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.