ಬೀದರ ಜಿಲ್ಲೆಯಲ್ಲಿ ವೆಂಟಿಲೇಟರ್ ಸಂಖ್ಯೆ ಹೆಚ್ಚಿಸಲು ಆಗ್ರಹ

ಬೀದರ:ಎ.20: ಕೋವಿಡ್ 2ನೇ ಅಲೆ?ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ವೆಂಟಿಲೇಟರ್‍ಗಳ ವ್ಯವಸ್ಥೆ ಮಾಡುವಂತೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಅಧ್ಯಕ್ಷರು ಮುಬಾಶಿರ್ ಸಿಂಧೆ ಆಗ್ರಹಿಸಿದರು.

‘ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಸೋಂಕು ಹರಡುವಿಕೆ ಪ್ರಮಾಣ ಗಣನೀಯ ಏರಿಕೆಯಾಗುತ್ತಿದ್ದು, ಪರಿಸ್ಥಿತಿ ಗಂಭೀರವಾಗುತ್ತಿದೆ. ಜನರ ಜೀವ ರಕ್ಷಣೆ ಉದ್ದೇಶಕ್ಕೆ ಶೀಘ್ರವೇ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಸಭೆ ಕರೆದು ಹೆಚ್ಚಿನ ವೆಂಟಿಲೇಟರ್‍ಗಳ ವ್ಯವಸ್ಥೆ ಮಾಡಬೇಕು’ ಎಂದು ಒತ್ತಾಯಿಸಿದರು.

‘ಕೋವಿಡ್ ಮೊದಲನೆ ಅಲೆಯಲ್ಲಿ ಸಾಕಷ್ಟು ಮಂದಿ ಮೃತಪಟ್ಟಿದ್ದಾರೆ.ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ವೆಂಟಿಲೇಟರ್‍ಗಳ ಕೊರತೆ ಎದುರಾಗುವ ಸಾಧ್ಯತೆಯಿದೆ. ಹೀಗಾಗಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಬೇಕು. ಸೋಂಕು ಹರಡುವಿಕೆ ತಡೆಗೆ ಹಾಗೂ ಸೋಂಕಿತರ ಸಾವಿನ ಸಂಖ್ಯೆ ತಗ್ಗಿಸಲು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.