ಬೀದಿನಾಯಿಗಳ ಹಾವಳಿ ಹೆಚ್ಚಳ,ಕಡಿವಾಣಕ್ಕೆ ಆಗ್ರಹ

ವಿಜಯಪುರ:ನ.29:ನಗರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಗುಮ್ಮಟ ನಗರಿ ಜನರು ಬೆಚ್ಚಿ ಬಿದ್ದಿದ್ದಾರೆ.
ನಗರದ ಬಡಿಕಮಾನ, ಬಾಗಾಯತ ಗಲ್ಲಿ ಹಾಗೂ ದೌಲತಕೋಟೆ ಬಡಾವಣೆ ಗಳಲ್ಲಿ ನಾಯಿಗಳು ಆರು ಮಕ್ಕಳ ಮೇಲೆ ದಾಳಿ ನಡೆಸಿ ಗಾಯಗೊಳಿಸಿವೆ. ಇದರಿಂದಾಗಿ ಪೆÇೀಷಕರು ಆತಂಕಕ್ಕೀಡಾಗಿದ್ದಾರೆ.
ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಮಕ್ಕಳಿಗೆ ರೇಬೀಸ್ ಲಸಿಕೆ ಹಾಕಿ ಚಿಕಿತ್ಸೆ ನೀಡಿದ್ದಾರೆ.
ಬೀದಿ ನಾಯಿಗಳ ಕಾಟಕ್ಕೆ ಪೆÇೀಷಕರು ಆಕ್ರೋಶಗೊಂಡಿದ್ದಾರೆ.
ಈಗಾಗಲೇ ಬೀದಿ ನಾಯಿಗಳ ಹತೋಟಿಗೆ ಕ್ರಮ ಕೈಗೊಳ್ಳಲು ಮನವಿ ಮಾಡಿಕೊಂಡಿದ್ದರೂ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಪೆÇೀಷಕರು ಆರೋಪಿಸಿದ್ದಾರೆ.
ಕೂಡಲೇ ಬೀದಿ ನಾಯಿಗಳನ್ನು ಹಿಡಿದು ಸ್ಥಳಾಂತರ ಮಾಡಬೇಕೆಂದು ಒತ್ತಾಯ ಮಾಡಿದ್ದಾರೆ. ಇಲ್ಲದಿದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.