
ಚಿತ್ರದುರ್ಗ.ಏ.೨೧; ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಗುರುವಾರ ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಮದಕರಿಪುರ ಗ್ರಾಮ ಪಂಚಾಯಿತಿ ವತಿಯಿಂದ ಬೀದಿ ನಾಟಕದ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಮದಕರಿಪುರ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಿ.ನಾಗರಾಜ್, ಕಾರ್ಯದರ್ಶಿ ಸೋಮಶೇಖರ್, ದ್ವಿತಿಯ ದರ್ಜೆ ಲೆಕ್ಕಸಹಾಯಕ ಮನೋಹರ್, ಸಿಬ್ಬಂದಿ , ಗ್ರಾಮಸ್ಥರು ಭಾಗವಹಿಸಿದ್ದರು.