ಬೀದಿ ನಾಟಕ ಹಾಗೂ ಜಾಥಾ ಮೂಲಕ ಮತದಾನ ಜಾಗೃತಿ

ಚಿತ್ರದುರ್ಗ.ಮೇ.೧; ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ “ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮಕ್ಕೆ ಭಾನುವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಚಾಲನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ “ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, “ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮವನ್ನು ಏಕಕಾಲದಲ್ಲಿ ರಾಜ್ಯದ ಎಲ್ಲ ಮತಗಟ್ಟೆಗಳಲ್ಲಿ ಹಾಗೂ ಜಿಲ್ಲಾ ಕಚೇರಿಗಳಲ್ಲಿ “ಪ್ರಜಾಪ್ರಭುತ್ವದ ಹಬ್ಬ ಮೇ-10 ಮತದಾನ” ಎಂಬ ಧ್ಯೇಯವಾಕ್ಯ ಒಳಗೊಂಡ ಬಾವುಟವನ್ನು ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಧ್ವಜಾರೋಹಣ ಮಾಡಲಾಗಿದೆ.  ಮತದಾರರಿಗೆ ತಮ್ಮ ತಮ್ಮ ಮತಗಟ್ಟೆಯ ಬಗ್ಗೆ ಪರಿಚಯ ಮಾಡಬೇಕು ಎಂಬುದು ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಮತದಾರರಿಗೆ ತಮ್ಮ ಮತಗಟ್ಟೆ ಯಾವುದು ಎಂಬುವುದ ಬಗ್ಗೆ ತಿಳುವಳಿಕೆ ಇರಬೇಕು. ಇದೇ ಮೊದಲ ಬಾರಿಗೆ ಚೊಚ್ಚಲ ಮತ ಚಲಾಯಿಸುವ ಯುವ ಮತದಾರರಿಗೆ ಮತಗಟ್ಟೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮಕ್ಕೆ ಹಮ್ಮಿಕೊಳ್ಳಲಾಗಿದೆ ಎಂದರು.