ಬೀದಿ ಬದಿ ವ್ಯಾಪಾರಸ್ಥರಿಗೆ ವ್ಯಾಕ್ಷಿನ್

ಗದಗ ಜೂ.4: ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ನಗರ, ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿರುವ ಬೀದಿ ಬದಿ ವ್ಯಾಪಾರಸ್ಥರು ಹಾಗೂ ಸಂಘದ ಪದಾಧಿಕಾರಿಗಳಿಗೆ ಕೋವಿಡ್-19 ವ್ಯಾಕ್ಷಿನ್ ಲಸಿಕೆ ಹಾಕಲಾಗುತ್ತಿದೆ.
ಗದಗ ಬೆಟಗೇರಿ ನಗರದ ಮುನ್ಸಿಪಲ್ ಕಾಲೇಜಿನಲ್ಲಿ ವ್ಯಾಪಾರಸ್ಥರಿಗೆ ಲಸಿಕೆ ಹಾಕಿಸಲಾಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ , ಪೌರಾಯುಕ್ತ ರಮೇಶ ಜಾಧವ ಹಾಗೂ ತಾಲೂಕ ಆರೋಗ್ಯ ಅಧಿಕಾರಿ ಡಾ|| ನೀಲಗುಂದ, ಆಶಾ ಕಾರ್ಯಕರ್ತೇಯರು ಹಾಗೂ ನಗರಸಭೆಯ ಸಿಬ್ಬಂದಿಗಳು ಹಾಜರಿದ್ದರು.
ನರೇಗಲ್ಲ :
ಗದಗ ಜಿಲ್ಲೆಯ ನರೇಗಲ್ಲ ಪಟ್ಟಣ ಪಂಚಾಯಿತಿ ವತಿಯಿಂದ ಸ್ಥಳೀಯ ಪ್ರಾರ್ಥಮಿಕ ಆರೋಗ್ಯ ಕೇಂದ್ರದಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ಕೋವಿಡ್ 19 ವ್ಯಾಕ್ಷಿನ್ ಲಸಿಕೆ ಹಾಕಲಾಯಿತು. ಈ ವೇಳೆ ಪ.ಪಂ ಮುಖ್ಯಾಧಿಕಾರಿ ಮಹೇಶ ನಿಡಶೇಶಿ, ಎಂ.ಎಂ. ಮಡಿವಾಳರ, ಡಾ. ಎ.ಡಿ. ಸಾಮುದ್ರಿ, ಸಂಗೀತಾ ಎಂ.
ಅಂದಪ್ಪ ಕುಂಬಾರ ಸೇರಿದಂತೆ ವ್ಯಾಪಾರಸ್ಥರು ಇದ್ದರು.