ಬೀದಿ ಬದಿ ವ್ಯಾಪಾರಿಗಳಿಗೆ 25 ಸಾ. ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹ

ಸೇಡಂ,ಮೆ,01: ರಾಜ್ಯದಾದ್ಯಂತ ಕೋವಿಡ್ ಸೋಂಕಿತರ ಮರಣಗಳ ಸಂಖ್ಯೆ ಹೆಚ್ಚಳವಾಗಲು ಆಕ್ಸಿಡೆಂಟ್ ಕೊರತೆಯಿಂದವಾಗುತ್ತಿದೆ. ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.14 ದಿನಗಳು ಯಾವುದೇ ಮುನ್ಸೂಚನೆ ನೀಡದೆ ಲಾಕಡೌನ್ ಮಾಡಿದ್ದರಿಂದ ಬೀದಿ ಬದಿ ವ್ಯಾಪಾರ ಮಾಡುವವರ ಆರ್ಥಿಕವಾಗಿ ಕುಂಠಿತವಾಗಿದೆ ಆದ್ದರಿಂದ ಪ್ರತಿ ಕುಟುಂಬಕ್ಕೆ ಸರ್ಕಾರದಿಂದ 25 ಸಾವಿರ ಆರ್ಥಿಕ ಪರಿಹಾರ ನೀಡಬೇಕು ಎಂದು ಸೇಡಂ ತಾಲೂಕಿನ ಬಹುಜನ ಸಮಾಜ ಪಕ್ಷದ ಅಧ್ಯಕ್ಷರಾದ ರೇವಣ್ಣಸಿದ್ದ.ಎಸ್.ಸಿಂಧೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.