
ತೊಕ್ಕೊಟ್ಟು, ಜ.೯- ಇಲ್ಲಿನ ನಗರ ಸಭಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯಲ್ಲಿರುವ ಬೀಫ್ ಸ್ಟಾಲ್ಗೆ ಬೆಂಕಿ ಬಿದ್ದು ಸುಟ್ಟು ಹೋದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಕಳೆದ ಹಲವು ವರ್ಷಗಳಿಂದ ತೊಕ್ಕೊಟ್ಟು ಮಾರುಕಟ್ಟೆಯಲ್ಲಿ ಮಾಂಸ ವ್ಯಾಪಾರ ಮಾಡುತ್ತಿದ್ದ 4 ತಾತ್ಕಾಲಿಕ ಶೆಡ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇದೊಂದು ದುಷ್ಕರ್ಮಿಗಳು ಕೃತ್ಯ ಎಂದು ಶಂಕಿಸಲಾಗಿದೆ. ಫಟನಾ ಸ್ಥಳಕ್ಕೆ ನಗರ ಸಭೆಯ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್, ಉಪಾಧ್ಯಕ್ಷ ಅಯ್ಯೂಬ್ ಮಂಚಿಲ, ಮಾಜಿ ಅಧ್ಯಕ್ಷ ರಾದಬಾಜಿಲ್ ಡಿಸೋಜ, ಯು.ಎ. ಇಸ್ಮಾಯಿಲ್, ಸದಸ್ಯರಾದ ಇಬ್ರಾಹಿಂ ಅಶ್ರಫ್, ಅಬ್ದುಲ್ ಅಝೀಝ್ ಕೋಡಿ, ವರ್ತಕರ ಸಂಘದ ಅಬ್ದುಲ್ ಕರೀಂ, ಮನ್ಸೂರ್ ಉಳ್ಳಾಲ ಹಾಗೂ ಅನ್ಸಾರ್ ಅಳೇಕಳ ಭೇಟಿ ನೀಡಿ ಪರಿಶೀಲನೆ ನಡೆಸಿ, ಘಟನೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.