ಬೀಳ್ಕೊಡುಗೆ ಕಾರ್ಯಕ್ರಮ

ಗದಗ, ಜು. 26: ಗದಗ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಸಲ್ಲಿಸಿದ ಎರಡು ವರ್ಷಗಳ ಸೇವೆ ಹಾಗೂ ಅನುಭವವನ್ನು ಎಂದಿಗೂ ಮರೆಯಲಾಗದು ಎಂದು ನಿರ್ಗಮಿತ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ನುಡಿದರು.
ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಜರುಗಿದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಗದಗ ಜಿಲ್ಲೆಯಲ್ಲಿ ಸುಮಾರು ಎರಡು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದು ಈ ಎರಡು ವರ್ಷಗಳಲ್ಲಿ ಹೆಚ್ಚಿನ ಸಮಯ ಕೋವಿಡ ನಿರ್ವಹಣೆ, ನೆರೆ ಹಾಗೂ ಚುನಾವಣೆಗಳನ್ನು ಯಶಸ್ವಿಯಾಗಿ ಜರುಗಿಸಲಾಗಿದೆ. ಈ ಕಾರ್ಯಕ್ಕೆ ಸಹಕಾರ ನೀಡಿದ ಎಲ್ಲ ಅಧಿಕಾರಿ ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದ ಅವರು ಕೋವಿಡ್ ನಿರ್ವಹಣೆಯಲ್ಲಿ ಜಿಲ್ಲೆಯು ರಾಜ್ಯದಲ್ಲಿಯೇ ಪ್ರಥಮವಾಗಿದ್ದು ಇದರ ಶ್ರೇಯ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೂ ಸಲ್ಲುತ್ತದೆ ಎಂದರು.
ಸರಕಾರಿ ಸೇವೆಗೆ ಬಂದಂತಹ ನಾವುಗಳು ಸಾರ್ವಜನಿಕರಿಗೆ ಸ್ಪಂಧಿಸುವದು ನಮ್ಮ ಕರ್ತವ್ಯವಾಗಿದೆ. ಗದಗನಲ್ಲಿ ಕಾರ್ಯನಿರ್ವಹಿಸಿದ್ದು ಸಂತೃಪ್ತಿ ತಂದಿದ್ದು ಇಲ್ಲಿಯ ಅಧಿಕಾರಿ ಸಿಬ್ಬಂದಿಗಳು ಒಂದು ಕುಟುಂಬದಂತೆ ನಮಗೆ ಎಲ್ಲ ರೀತಿಯ ಸಹಕಾರ ನೀಡಿರುವಿರಿ ಎಂದು ಮನದಾಳದ ಮಾತುಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಪ್ರಭಾರಿ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಶಿಪ್ರಕಾಶ ದೇವರಾಜು,
ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು. ಮುಂಡರಗಿ ತಹಶೀಲ್ದಾರ ಆಶಪ್ಪ ಪೂಜಾರ ಅವರು ನಿರ್ಗಮಿತ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ್ ಬಾಬು ಅವರ ಕುರಿತು ರಚಿಸಿದ ಕವನವನ್ನು ಕು.ನಯನಾ ಅಳವಂಡಿ ಸುಶ್ರಾವ್ಯವಾಗಿ ಹಾಡುವ ಮೂಲಕ ಸಭಿಕರ ಹಾಗೂ ಅತಿಥಿಗಳ ಮನಗೆದ್ದರು.