ಬುದ್ದಿವಂತ-2 ಬಿಡುಗಡೆಗೆ ಸಜ್ಜು

ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಬುದ್ದಿವಂತ 2” ಚಿತ್ರ ಯಾವಾಗ ಬಿಡುಗಡೆಯ ದಿನಾಂಕ ನಿಗಧಿಯಾಗಿದೆ, ನಟ ಉಪೇಂದ್ರ ಹುಟ್ಟುಹಬ್ಬಕ್ಕೆ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು ಅಭಿಮಾನಿಗಳಿಗೆ ಉಡುಗೊರೆ ರೂಪದಲ್ಲಿ ತೆರೆಗೆ ಬರಲಿದೆ.

ಜೈದೇವ್ ನಿರ್ದೇಶನದ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ. ಎಸ್ ನವೀನ್ ಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಜಾಗೂ ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಉಪೇಂದ್ರ ಅವರಿಗೆ ನಾಯಕಿಯರಾಗಿ ಸೋನಾಲ್ ಮೊಂಟೆರೊ ಹಾಗೂ  ಮೇಘನರಾಜ್ ನಟಿಸಿದ್ದಾರೆ. ಶ್ರೀನಗರ ಕಿಟ್ಟಿ ಅವರು ವಿಶೇಷಪಾತ್ರದಲ್ಲಿ  ಕಾಣಿಸಿಕೊಂಡಿದ್ದಾರೆ.

ಹುಟ್ಟುಹಬ್ಬಕ್ಕೆ ಬುದ್ದಿವಂತ

ನಟ ಉಪೇಂದ್ರ ಅವರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ಬುದ್ದಿವಂತ-2 ಮುಂದಿನ ತಿಂಗಳು ಬಿಡುಗಡೆಗೆ ಸಜ್ಜಾಗಿದೆ. ಚಿತ್ರಕ್ಕೆ ಜೈ ದೇವ್  ಆಕ್ಷನ್ ಕಟ್ ಹೇಳಿದ್ದು ಚಿತ್ರದಲ್ಲಿ ಸೋನಲ್ ಮಾಂಟೇರಿಯೋ, ನಟ ಶ್ರೀನಗರ ಕಿಟ್ಟಿ ಸೇರಿದಂತೆ ಹಲವು ಕಲಾವಿದರಿದ್ದಾರೆ