ಬುರ್ಖಾ ಧರಿಸದಿದ್ದಕ್ಕೆ ಬಸ್ ಹತ್ತಲು ಬಿಡದ ಡ್ರೈವರ್ ಅಮಾನತು

ಕಲಬುರಗಿ,ಜು 28: ಬುರ್ಖಾ ಧರಿಸದಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರನ್ನ ಬಸ್ ಹತ್ತಲು ಬಿಡದ ಬಸ್‍ಚಾಲಕನನ್ನ ಅಮಾನತುಗೊಳಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಹಿಜಬ್‍ಧಾರಿ ಶಾಲಾ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಬಸ್ ಚಾಲಕನನ್ನ ಅಮಾನತುಗೊಳಿಸಲಾಗಿದೆ.
ಕಲಬುರಗಿ ಬಸ್ ಡಿಪೆÇೀ-3ರ ಚಾಲಕ ಮೆಹಬೂಬ್ ಪಟೇಲ್ ವಿರುದ್ಧ ಕಮಲಾಪುರ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲದೇ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಕೆಕೆಆರ್‍ಟಿಸಿ ಕಲಬುರಗಿ ವಿಭಾಗದ ಡಿಸಿ ಚಾಲಕನನ್ನ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ನಡೆದಿದ್ದೇನು?:
ಎರಡು ದಿನಗಳ ಹಿಂದೆ ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಓಕಳಿ ಗ್ರಾಮದ ಬಳಿ ಹಿಜಬ್‍ಧಾರಿ ವಿದ್ಯಾರ್ಥಿನಿಯರು ತಮ್ಮೂರಿಗೆ ಹೊರಟಿದ್ದರು. ಈ ವೇಳೆ ಚಾಲಕ ನೀನು ಮುಸ್ಲಿಂ ಇದ್ದಿಯಲ್ವ.. ಬುರ್ಖಾ ಧರಿಸಿ ಬಾ.. ಆಗ ಮಾತ್ರ ಬಸ್ ಹತ್ತಲು ಬಿಡುತ್ತೇನೆ ಎಂದು ಹೇಳಿದ್ದ. ಆಗ ಶಿಕ್ಷಕರು ಮತ್ತು ಬಸ್ ಚಾಲಕನ ನಡುವೆ ಮಾತಿನ ಚಕಮಕಿ ನಡೆದಿತ್ತು.