`ಬುಲೆಟ್’ಗೆ ಮುಹೂರ್ತ

ಚಾಕಲೇಟ್ ಹೀರೋ ಧರ್ಮ ಕೀರ್ತಿರಾಜ್ ನಾಯಕರಾಗಿ ನಟಿಸುತ್ತಿರುವ ಹೊಸ ಚಿತ್ರ “ ಬುಲೆಟ್” ಸೆಟ್ಟೇರಿದೆ.

ಸತ್ಯಜಿತ್ ನಿರ್ಮಿಸಿ, ನಿರ್ದೇಶಿಸುತ್ತಿರುವ ಚಿತ್ರದ ಮುಹೂರ್ತದ ಮೊದಲ ದೃಶ್ಯಕ್ಕೆ ಶಾಸಕ ಭೈರತಿ ಸುರೇಶ್  ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಶೆಟ್ಟಿ ಆರಂಭ ಫಲಕ ತೋರಿದರು. ಮಹಿಮ್ ಕ್ಯಾಮೆರಾ ಚಾಲನೆ ಮಾಡಿ ಶುಭ ಕೋರಿದರು.

ಈ ವೇಳೆ ಮಾತಿಗಿಳಿದ ನಿರ್ದೇಶಕ ಸತ್ಯಜಿತ್,  ಬುಲೆಟ್ ಚಿತ್ರ ಕ್ರೈಮ್ ಥ್ರಿಲ್ಲರ್ ಹಾಗೂ ಫ್ಯಾಮಿಲಿ ಸೆಂಟಿಮೆಂಟ್ ಕಥೆ ಆಧರಿಸಿದೆ.ಚಿತ್ರವನ್ನು ಬೆಂಗಳೂರು, ಗೋವಾ, ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ. ಮುಂಬೈನ ಶ್ರೀಯಾ ಶುಕ್ಲಾ ಹಾಗೂ ಅಜಿತಾ ಜಾ ನಾಯಕಿಯರು. ಶ್ರೀಯಾ ಅವರು ಸುಶಾಂತ್ ಸಿಂಗ್ ಅವರ ಬಯೋಪಿಕ್ ಚಿತ್ರದಲ್ಲಿ ನಟಿಸಿದ್ದಾರೆ.   ಅಜಿತಾ ವೆಬ್ ಸೀರಿಸ್‍ಗಳಲ್ಲಿ ನಟಿಸಿದ್ದಾರೆ ಎನ್ನುವ ಮಾಹಿತಿ ನೀಡಿದರು.

ನಾಯಕ ಧರ್ಮ ಕೀರ್ತಿ ರಾಜ್, ಅಪ್ಪ, ಮಗನ ಸೆಂಟಿಮೆಂಟ್ ಸನ್ನಿವೇಶಗಳು ಜನರಿಗೆ ಹತ್ತಿರವಾಗಲಿದೆ. ತಂದೆಯ ಪಾತ್ರದಲ್ಲಿ ಸತ್ಯಜಿತ್ ಅವರೆ ಅಭಿನಯಿಸುತ್ತಿದ್ದಾರೆ. ಎರಡು ಶೇಡ್‍ಗಳಲ್ಲಿ ಪಾತ್ರವಿರುತ್ತದೆ. ಒನಮ್ಮ ತಂಡಕ್ಕೆ ಎಲ್ಲರ ಪೆÇ್ರೀತ್ಸಾಹವಿರಲಿ ಎಂದರು. ನಾಯಕಿಯರಾದ ಶ್ರೀಯಾ ಶುಕ್ಲ ಹಾಗೂ ಅಜಿತಾ ಜಾ ತಮ್ಮ ಪಾತ್ರ ಪರಿಚಯ ಮಾಡಿಕೊಂಡು, ಕನ್ನಡ ಚಿತ್ರದಲ್ಲಿ ಅಭಿನಯಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ನಟ ಇಶ್ಯಾಕ್ ಬಾಜಿ, ಛಾಯಾಗ್ರಹಕ ಪಿ.ವಿ.ಆರ್ ಸ್ವಾಮಿ, ಸಂಗೀತ ನಿರ್ದೇಶಕ ರಾಜ್ ಭಾಸ್ಕರ್ ಮುಂತಾದವರು ಮಾಹಿತಿ ಹಂಚಿಕೊಂಡರು.