ಬೃಹತ್ ರಕ್ತದಾನ ಶಿಬಿರ

ಕಲಬುರಗಿ.ಸೆ.9: ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆ ಜಿಲ್ಲಾ ಶಾಖೆ ಕಲಬುರಗಿ ಮತ್ತು ಸರಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಕುಸನೂರು ರಸ್ತೆ, ಕಲಬುರಗಿ, ಇವರುಗಳ ಸಂಯುಕ್ತ ಆಶ್ರಯದಲ್ಲಿ ೭೫ನೇ ಸ್ವಾತಂತ್ರ್ಯದ ಅಮೃತ ಮಹೋತ್ಸದ ನಿಮಿತ್ಯ ಸರಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಕುಸನೂರು ರಸ್ತೆ, ಕಲಬುರಗಿಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಶಿಬಿರವನ್ನು SBI ಉಪ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಪಿ. ಎಲ್. ಶ್ರೀನಿವಾಸರಾವ್‌ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ರಕ್ತದಾನ ಮಹತ್ವದ ಬಗ್ಗೆ ತೀಳಿಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್. ಎಸ್. ಹತ್ತಿ ಅವರು ಅಧ್ಯಕ್ಷತೆ ಮತ್ತು ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆಯ ಸಭಾಪತಿಗಳಾದ ಶ್ರೀ ಅಪ್ಪಾರಾವ ಅಕ್ಕೋಣೆ ಅವರು ಮುಖ್ಯ ಅತಿಥಿಗಳ ಸ್ಥಾನ ವಹಿಸಿದರು ಹಾಗೂ ಉಪಸಭಾಪತಿಗಳಾದ ಶ್ರೀ ಅರುಣಕುಮಾರ ಲೋಯಾ, ಶ್ರೀಮತಿ ಭಾಗ್ಯಲಕ್ಷ್ಮೀ ಎಮ್. ಖಜಾಂಚಿ ಮತ್ತು ರಕ್ತದಾನ ಶಿಬಿರದ ಸಂಯೋಜಕರಾದ ಶ್ರೀ ಜಿ. ಎಸ್‌. ಪದ್ಮಾಜಿ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಶ್ರೀ ರವೀಂದ್ರ ಶಾಬಾದಿ ಅವರು ಸ್ವಾಗತಿಸಿ ಶಿಬಿರವನ್ನು ನಡೆಸಿ ಕೊಟ್ಟರು. ಈ ರಕ್ತದಾನ ಶಿಬಿರದಲ್ಲಿ ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸೇರಿ ಸುಮಾರು 200 ಜನ ರಕ್ತದಾನ ಮಾಡಿದರು.