ಸಂಜೆವಾಣಿ ವಾರ್ತೆ
ಹೊಸಪೇಟೆ, ಜು.02: ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಆಯೋಜಿಸಲಾದ ಬೃಹತ್ ವನಮಹೋತ್ಸವ ಕಾರ್ಯಕ್ರಮಕ್ಕೆ ಹಜ್, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ಅವರು ಸಾಂಕೇತಿಕವಾಗಿ ಚಾಲನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಸಸಿ ನೆಡುವ ಮೂಲಕ ಒಂದು ವಾರಗಳ ಕಾಲ ಜಿಲ್ಲೆಯಾದ್ಯಂತ ನಡೆಯುವ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಹೆಚ್.ಆರ್.ಗವಿಯಪ್ಪ, ಎಂ.ಪಿ.ಲತಾ ಮಲ್ಲಿಕಾರ್ಜುನ, ಡಾ.ಎನ್.ಟಿ.ಶ್ರೀನಿವಾಸ್, ಕೃಷ್ಣನಾಯ್ಕ, ಜಿಲ್ಲಾಧಿಕಾರಿ ವೆಂಕಟೇಶ್ ಟಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಪ್ರಾದೇಶಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಅರ್ಸಲನ್, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.