ಬೆಂಕಿ ಹೊತ್ತಿ ಉರಿದ ಓಮಿನಿ ಕಾರು

ಬೆಳಗಾವಿ, ಆ 3: ಗ್ಯಾಸ್ ಲೀಕೆಜ್ ಆಗಿ ಮಾರುತಿ ಓಮಿನಿ ಕಾರೊಂದು ಸುಟ್ಟು ಭಸ್ಮವಾದ ಘಟನೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದ ರಸ್ತೆಯೊಂದರಲ್ಲಿ ಇಂದು ನಡೆದಿದೆ.
ಸಂಕೇಶ್ವರ ಪಟ್ಟಣದ ಬಸ್ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ.
ಕಾರಿನಲ್ಲಿದ್ದವರು ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರು ನಿಲ್ಲಿಸಿ ಹೊರಗೆ ಬಂದಿದ್ದರಿಂದ ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ರಸ್ತೆಯಲ್ಲಿ ಕಾರು ಹೊತ್ತಿ ಉರಿಯುತ್ತಿದ್ದಂತೆ ಸುತ್ತಲೂ ಸಾವಿರಾರು ಜನರು ಸೇರಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು.