
ಬೆಂಗಳೂರು, ಸೆ.೩- ಇಂದು ಕೂಡ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿಯಲಿದೆ.
ನಿನ್ನೆ ಮಧ್ಯಾಹ್ನವೂ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಿದೆ. ಸಂಜೆಯೂ ಮಳೆ ಸುರಿಯಲಿದೆ. ಸೆಪ್ಟೆಂಬರ್ ೭ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಗಸ್ಟ್ ೩೧ರ ರಾತ್ರಿ ಭಾರೀ ಮಳೆಯಾಗಿತ್ತು.ಈ ಮಳೆ ಬೆಂಗಳೂರಿನ ಚಿತ್ರಣವನ್ನೇ ಬದಲಿಸಿದೆ. ಇಂದು ಮತ್ತೆ ಹಲವೆಡೆ ಭಾರೀ ಮಳೆಯಾಗಲಿದೆ. ರಾತ್ರಿ ವೇಳೆ ಭಾರೀ ಮಳೆಯಾಗುತ್ತದೆ.
ಸೆಪ್ಟೆಂಬರ್ ೭ರ ವರೆಗೆ ಭಾರೀ ಮಳೆಯಾಗಲಿದೆ.ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನಿನ್ನೆ ಬೆಂಗಳೂರಿನ ಚಾಮರಾಜಪೇಟೆ, ಶಾಂತಿನಗರ, ಮಲ್ಲೇಶ್ವರಂ, ಗಾಂಧಿಬಜಾರ್, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗಿದೆ. ಕೆಲವೆಡೆ ಮಳೆಯಾಗಿಲ್ಲ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ರಾತ್ರಿ ಮಳೆಯಾಗುವ ಸಾಧ್ಯತೆ ಇದೆ.
ಕೋಲಾರ, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಿನ್ನೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಇಂದು ಕೂಡ ವರುಣನ ಆರ್ಭಟ ಮುಂದುವರಿಯಲಿದೆ.