ಬೆಂಗಳೂರಲ್ಲಿ ನಡ್ಡಾ ರೋಡ್ ಶೋ

ಬೆಂಗಳೂರು,ಮಾ.೧೦:ಬಿಜೆಪಿಯ ವಿಜಯಸಂಕಲ್ಪ ಯಾತ್ರೆ ಬೆಂಗಳೂರಿನ ಸರ್ವಜ್ಞ ನಗರ ಮತ್ತು ಶಿವಾಜಿನಗರ ಕ್ಷೇತ್ರದಲ್ಲಿಂದು ನಡೆಯಿತು. ನಿನ್ನೆ ಕೆಆರ್ ಪುರ ಕ್ಷೇತ್ರದಲ್ಲಿ ನಡೆದ ವಿಜಯಸಂಕಲ್ಪಯಾತ್ರೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪಾಲ್ಗೊಂಡಿದ್ದರು. ಇಂದು ಸರ್ವಜ್ಞ ನಗರ, ಶಿವಾಜಿ ನಗರ ಕ್ಷೇತ್ರದಲ್ಲಿಂದು ನಡೆದ ವಿಜಯಸಂಕಲ್ಪ ಯಾತ್ರೆಯಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾದರು.ಎರಡೂ ಕ್ಷೇತ್ರಗಳಲ್ಲಿ ಸಚಿವ ಆರ್. ಅಶೋಕ್, ಸಂಸದ ಪಿ.ಸಿ. ಮೋಹನ್, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ. ಅ. ದೇವೇಗೌಡ, ಕೇಂದ್ರ ಜಿಲ್ಲಾಧ್ಯಕ್ಷ ಮಂಜುನಾಥ್, ಬಿಬಿಎಂಪಿಯ ಮಾಜಿ ಆಡಳಿತ ಪಕ್ಷದ ನಾಯಕ ಪದ್ಮನಾಭರೆಡ್ಡಿ, ಗೋವಿಂದರಾಜು ಸೇರಿದಂತೆ ಹಲವು ನಾಯಕರು ಕ್ಷೇತ್ರದಾದ್ಯಂತ ರೋಡ್ ಶೋ ನಡೆಸಿದರು.
ಬಿಜೆಪಿಯ ವಿಜಯಸಂಕಲ್ಪ ಯಾತ್ರೆಗೆ ಅಪಾರ ಜನ ಬೆಂಬಲ ವ್ಯಕ್ತವಾಗಿದ್ದು, ನೂರಾರು ಮಂದಿ ಈ ರೋಡ್ ಶೋನಲ್ಲಿ ಪಾಲ್ಗೊಂಡರು. ಎಲ್ಲೆಡೆ ಬಿಜೆಪಿ ಪರ ಜೈಕಾರದ ಘೋಷಣೆಗಳು ಮುಗಿಲು ಮುಟ್ಟಿತ್ತು.ಇದೇ ಸಂದರ್ಭದಲ್ಲಿ ಮಾತನಾಡಿದ ಆರ್. ಅಶೋಕ್ ಅವರು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿ ಅಧಿಕಾರ ಹಿಡಿಯುವುದು ನಿಶ್ಚಿತ ಬಿಜೆಪಿಯ ಕಾರ್ಯಕ್ರಮಗಳು ಜನರ ಮನಮುಟ್ಟಿವೆ. ಚುನಾವಣೆಯಲ್ಲಿ ಜನ ಬಿಜೆಪಿಗೆ ಆರ್ಶೀವಾದ ಮಾಡಲಿದ್ದಾರೆ ಎಂದರು.ಬಿಜೆಪಿಯ ವಿಜಯಸಂಕಲ್ಪ ಯಾತ್ರೆಗೆ ಎಲ್ಲೆಡೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಜನ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದಾರೆ. ಏನೇ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದರು.