ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣಕ್ಕೆ ಬೇಡಿಕೆ

ಬೆಂಗಳೂರು, ಅ.೧೨- ರಾಜ್ಯ ರಾಜಧಾನಿ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ)ದಲ್ಲಿ ೨೦೨೩-೩೩ರ ವೇಳೆಗೆ ಪ್ರಯಾಣಿಕರ ಸಂಖ್ಯೆ ವಾರ್ಷಿಕವಾಗಿ ೯.೨ ಕೋಟಿ ದಾಟುತ್ತದೆ ಎಂದು ಅಂದಾಜಿಸಲಾಗಿದ್ದು, ಈ ನಡುವೆ ಬೆಂಗಳೂರು ನಗರಕ್ಕೆ ಎರಡನೇ ವಿಮಾನ ನಿಲ್ದಾಣ ಬೇಕೆನ್ನುವ ಬೇಡಿಕೆ ಕೇಳಿಬಂದಿದೆ.
ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ, ಕೆಐಎ ನಿರ್ವಾಹಕರಾದ ಹರಿ ಮಾರರ್ ಈ ಕುರಿತು ಪ್ರತಿಕ್ರಿಯೆ ನೀಡಿ, ಈ ವರ್ಷ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ೪ ಕೋಟಿ ಆಗಿದೆ.
ಇದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಾಮರ್ಥ್ಯಕ್ಕೆ ಈಗಿನ ದಟ್ಟಣೆ ಸರಿಯಾಗಲಿದೆ. ಆದರೆ, ೨೦೩೨ರ ವೇಳೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಕೆ ಮಾಡುವವರ ಸಂಖ್ಯೆ ೯.೨ ಕೋಟಿ ಮುಟ್ಟಲಿದೆ ಎಂದು ಅಂದಾಜಿಸಲಾಗಿದೆ. ಇದು ೩೦ ಪ್ಲಸ್ ೩೦ ವರ್ಷಗಳ ನಮ್ಮ ರಿಯಾಯಿತಿ ಅವಧಿಯ ಮೊದಲಾರ್ಧವು ಮುಗಿಯುವ ಮೊದಲೇ ಆಗಿದೆ ಎಂದರು.
ಮೊದಲ ೩೦ ವರ್ಷಗಳು ಪೂರ್ಣಗೊಳ್ಳುವ ಮೊದಲೇ ಕೆಐಎಯ ರಚನಾತ್ಮಕ ಸಾಮರ್ಥ್ಯವನ್ನು ಪೂರ್ಣವಾಗಿ ಬಳಸಿಕೊಳ್ಳಲಾಗುವುದು ಎಂದು ಹೇಳಿದ ಅವರು, ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣದ ಅಗತ್ಯವಿದೆ ಎಂದು ಹೇಳಿದರು.
ಎರಡನೇ ವಿಮಾನ ನಿಲ್ದಾಣ ಸ್ಥಾಪನೆಗೆ ಭೂಮಿಯನ್ನು ಗುರುತಿಸಲು ಮತ್ತು ಸೂಚಿಸಲು ಮತ್ತು ಅದನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಾರಂಭಿಸುವ ಪ್ರಯತ್ನಗಳು ಕನಿಷ್ಠ ಎರಡು ವರ್ಷಗಳ ಹಿಂದೆ ಪ್ರಾರಂಭವಾಗಬೇಕಿತ್ತು. ಸಂಪರ್ಕವನ್ನು ಹೊಂದಿಲ್ಲದಿರುವ ಮೂಲಕ ನಮ್ಮ ಸ್ವಂತ ಸಾಮರ್ಥ್ಯವನ್ನು ನಾವು ಉಸಿರುಗಟ್ಟಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಸಮಯ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.
ಅಲ್ಲದೆ, ನಮ್ಮ ವಿಮಾನ ನಿಲ್ದಾಣದ ೩೦+೩೦ ವರ್ಷದ ರಿಯಾಯಿತಿ ಅವಧಿಯ ಮೊದಲಾರ್ಧದಲ್ಲಿಯೇ ಪೂರ್ತಿ ಪ್ರಯಾಣಿಕರ ಸಾಮರ್ಥ್ಯವನ್ನು ತಲುಪುತ್ತಿದ್ದು, ಈ ಹಿನ್ನೆಲೆ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡಲು ಹೊಸ ವಿಮಾನ ನಿಲ್ದಾಣ ಆಗಬೇಕು ಎಂದು ಹೇಳಿದ್ದಾರೆ.