ಬೆಂಗಳೂರಿನಲ್ಲಿ‌ ತಂಪೆರೆದ ಮಳೆ ಇನ್ನೆರಡು ದಿನ ಮುಂದುವರಿಕೆ ಸಾಧ್ಯತೆ

ಬೆಂಗಳೂರು,ಏ.14-ನಗರದ ಮೆಜೆಸ್ಟಿಕ್, ಗಾಂಧಿನಗರ, ಮಲ್ಲೇಶ್ವರಂ, ಹಾಗೂ ಯಶವಂತಪುರ ಇನ್ನಿತರ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಇನ್ನೇರಡು ದಿನಗಳ ಕಾಲ‌ ಮಳೆಯಾಗಲಿದೆ.
ನಗರದಲ್ಲಿ ಸುರಿದ ಮಳೆಯು ಬಿಸಿಲಿನ ಬೇಗೆಯಿಂದ ಬವಸವಳಿದಿದ್ದ ಜನತೆಗೆ ತಂಪೆರದಿದೆ.
ರಾಜ್ಯದ ಉತ್ತರ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗಲಿದ್ದು ಏ. 16 , 17ರಂದು ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಲಿದ್ದು, ಏಪ್ರಿಲ್ 18ರಿಂದ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದರು.
ಉತ್ತರ ಒಳನಾಡಿನಲ್ಲಿ ಏ. 14, 15ರಂದು ಹಲವು ಕಡೆಗಳಲ್ಲಿ ಮಳೆಯಾಗಲಿದೆ. ಏ. 17, 18ರಂದು ಒಣಹವೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನಲ್ಲಿ ಏ. 14, 15ರಂದು ಹಲವು ಕಡೆ ಮಳೆಯಗಾಲಿದ್ದು, ಏ. 16ರಿಂದ 18ರವರೆಗೆ ಕೆಲವು ಕಡೆ ಮಾತ್ರ ಮಳೆಯಾಗಲಿದೆ. ದಕ್ಷಿಣ ಕನ್ನಡ, ಚಾಮರಾಜನಗರ, ಹಾಸನ ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಇಂದು ಮತ್ತು ನಾಳೆಗೆ ಎಲ್ಲೋ ಅಲರ್ಟ್ ಕೊಡಲಾಗಿದೆ ಎಂದರು. ಬೆಂಗಳೂರಿನಲ್ಲೂ ಏ. 14 ಹಾಗೂ 15ರಂದು ಮಳೆಯಾಗುವ ಸಾಧ್ಯತೆಯಿದೆ ಎಂದರು.