ಬೆಂಗಳೂರಿನಲ್ಲಿ ಇನ್ನೂ 3 ದಿನ ಗುಡುಗುಸಹಿತ ಮಳೆ

ಬೆಂಗಳೂರು, ಸೆ ೯- ರಾಜ್ಯದ ಕೆಲವೆಡೆ ಇನ್ನೂ ಮೂರು ದಿನ ವರಣನ ಆರ್ಭಟ ಮುಂದುವರೆಯಲಿದೆ. ನಿನ್ನೆ, ಇಂದು ವರುಣ ಬಿಡುವು ನೀಡಿದ್ದರೂ ಎಚ್ಚರಿಕೆ ನೀಡಲಾಗಿದೆ.
ಇತ್ತೀಚೆಗೆ ರಾಜ್ಯದ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಗದಗ ಸೇರಿದಂತೆ ವಿವಿಧೆಡೆ ಸುರಿದ ಮಳೆಯಿಂದ ಇನ್ನು ಚೇತರಿಸಿಕೊಳ್ಳುತ್ತಿರುವಾಗಲೇ ಮತ್ತೆ ಮಳೆ ಆರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಸಾರ್ವಜನಿಕರು ಸಂಜೆ ಬೇಗ ಮನೆ ಸೇರಿಕೊಳ್ಳುವುದು ಒಳ್ಳೆಯದು. ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ನಿನ್ನೆ ಸ್ವಲ್ಪ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಸೆ. ೧೪ ರವೆರೆ ಭಾರಿ ಮಳೆಯಾಗಲಿದೆ. ಕರವಾಳಿ , ಉತ್ತರ ಕರ್ನಾಟಕದಲ್ಲಿ ನಾಲ್ಕು ದಿನ ಮಳೆಯಾಗಲಿದೆ. ಕರಾವಳಿ, ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆ ಯಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ ಸೇರಿದಂತೆ ೧೦ ಕಡೆ ಮಳೆಯಾಗಲಿದೆ. ಈಗಾಗಲೇ ನಗರದಲ್ಲಿ ಸುರಿದ ಮಳೆಗೆ ಇಡೀ ಬೆಂಗಳೂರೇ ನಲುಗಿ ಹೋಗಿದೆ.
ಬೆಂಗಳೂರಿನಲ್ಲಿ ಇನ್ನೂ ೩ ದಿನ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಹಾಗೇ, ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ೩ ದಿನ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಕರ್ನಾಟಕ, ಗೋವಾ, ಕೇರಳ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೂಡ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ. ಸಿಕ್ಕಿಂ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡುಗಳಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಬಿಹಾರ ಮತ್ತು ಮಧ್ಯಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.