ಬೆಂಗಳೂರಿನಲ್ಲಿ ನಾಳೆ ರುಪ್ಸಾ ಪ್ರತಿಭಟನೆ

ರಾಯಚೂರು.ಜ.೦೫- ರುಪ್ಸಾ ಕರ್ನಾಟಕ ಪ್ರತಿಭಟನೆಗೆ ಜಿಲ್ಲೆಯಿಂದ ೨೦೦ ಕ್ಕೂ ಹೆಚ್ಚು ಶಾಲಾಡಳಿತ ಮಂಡಳಿ ಮುಖ್ಯಸ್ಥರು, ಶಿಕ್ಷಕರು ಭಾಗೀಯಾಗಲಿದ್ದಾರೆಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಸಂಗಮೇಶ ಮಂಗಾನವರು ತಿಳಿಸಿದ್ದಾರೆ.
ಖಾಸಗಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರದ ಮೇಲೆ ಒತ್ತಡವೇರುವ ಉದ್ದೇಶದಿಂದ ಈ ಪ್ರತಿಭಟನೆ ನಡೆಸಲಾಗುತ್ತದೆ. ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿದೆ. ಜಿಲ್ಲೆಯಿಂದ ಅನೇಕರು ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದ್ದಾರೆ.