ಬೆಂಗಳೂರಿನಲ್ಲಿ ಫಿಲ್ಮ್ಂ ಫೇರ್ ಪ್ರಶಸ್ತಿ ಸಮಾರಂಭ

ಮೊದಲ ಬಾರಿಗೆ ಬೆಂಗಳೂರಿನಲ್ಲಿ ಸೌತ್ ಫಿಲಂ ಫೇರ್ ಪ್ರಶಸ್ತಿ ಸಮಾರಂಭ ಕಮರ್ ಫಿಲಂ ಫ್ಯಾಕ್ಟರಿ ಸಹಯೋಗದೊಂದಿಗೆ ಮಾರ್ಚ್ ಮೊದಲ ವಾರದಲ್ಲಿ ಎರಡು ದಿನಗಳ ಕಾಲ  ಸಮಾರಂಭ ನಡೆಯಲಿದೆ.

ಅನೇಕ ಮನೋರಂಜನಾ ಕಾರ್ಯಕ್ರಮ ಪ್ರಶಸ್ತಿ ಪ್ರದಾನ ಸಮಾರಂಭ  ಮತ್ತಷ್ಟು ಶೃಂಗಾರಗೊಳಿಸಲಿದೆ ಎಂದರು ಫಿಲಂ ಫೇರ್ ಸಂಪಾದಕ‌ ಎಂದರು ಜಿತೇಶ್ ಪಿಳ್ಳೈ.

ಕಮರ್ ಮಾಹಿತಿ ನೀಡಿ, ಕಳೆದ ಬಾರಿ ಸಮಾರಂಭ ಕೈ ತಪ್ಪಿತ್ತು.  ಮಾರ್ಚ್‌ನಲ್ಲಿ ಇದೇ ಮೊದಲ ಬಾರಿಗೆ ಫಿಲಂ ಫೇರ್ ಸೌತ್  ಅದ್ದೂರಿಯಾಗಿ ನಡೆಯಲಿದೆ ಎಂದರು.

ಹಿರಿಯ ನಟಿ ತಾರಾ, ಪ್ರತಿಭಾವಂತ ಕಲಾವಿದರ ಹಾಗೂ ತಂತ್ರಜ್ಞರ ಸಮ್ಮಿಲನವಾಗುವ ಮಾಹಾ ವೇದಿಕೆ ಫಿಲಂ ಫೇರ್ ಪ್ರಶಸ್ತಿ ಸಮಾರಂಭ.  ಬೆಂಗಳೂರಿನಲ್ಲಿ ಸಮಾರಂಭ ನಡೆಯುತ್ತಿರುವುದು ತುಂಬಾ ಸಂತೋಷ. ಯಾವುದೇ ಕೊರತೆ  ಬಾರದ ಹಾಗೆ ಸಮಾರಂಭ ಕಮರ್ ನಡೆಸುತ್ತಾರೆ ಎಂಬ ನಂಬಿಕೆ ನನಗಿದೆ ಎಂದರು.

ನಟಿ ಪೂಜಾ  ಹೆಗ್ಡೆ, ಎಲ್ಲರೂ  ಪುಟ್ಟ‌ಬೊಮ್ಮ ಎಂದು ಕರೆಯುತ್ತಿದ್ದಾರೆ. ಫಿಲಂ ಫೇರ್ ನಲ್ಲಿ ಭಾಗವಹಿಸುತ್ತಿರುವುದಕ್ಕೆ ಖುಷಿಯಾಗುತ್ತಿದೆ. ಮಂಗಳೂರಿನವಳು.ಹುಟ್ಟಿಬೆಳೆದದ್ದು ಮುಂಬೈನಲ್ಲಿ.‌  ಕರ್ನಾಟಕದವಳು ಅಂತ ಹೇಳಿಕೊಳ್ಳುವುದಕ್ಕೆ ಹೆಮ್ಮೆ ಇದೆ ಎಂದರು. ಶಾಸಕ ಶಾಮನೂರು ಶಿವಶಂಕರಪ್ಪ, ನಿರ್ಮಾಪಕ ಉಮೇಶ್ ಬಣಕಾರ್, ಶಾಸಕ ಬೈರತಿ ಸುರೇಶ್, ನಟಿಯರಾದ ಪ್ರಿಯಾಂಕ ಉಪೇಂದ್ರ, ಹರ್ಷಿಕಾ ಪೂಣಚ್ಛ ಸೇರಿ ಗಣ್ಯರಿದ್ದರು.