ಬೆಂಗಳೂರಿನಲ್ಲಿ ಸಿರಿ ಗ್ರಾಮೋದ್ಯೋಗ ಮಳಿಗೆ ಶುಭಾರಂಭ

ಧರ್ಮಸ್ಥಳ , ಎ.೬-ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ(ರಿ), ಬೆಳ್ತಂಗಡಿ ಇದರ ಸ್ವಂತ ೧೫ನೇ ಮಾರಾಟ ಮಳಿಗೆ ಬೆಂಗಳೂರಿನ ಜಿಕೆವಿಕೆ ಕೃಷಿ ವಿಶ್ವ ವಿದ್ಯಾನಿಲಯದ ಆವರಣದಲ್ಲಿ ಶುಭಾರಂಭಗೊಂಡಿತು. ಮಳಿಗೆಯಲ್ಲಿ ಕೃಷಿ ವಿಶ್ವ ವಿದ್ಯಾನಿಲಯದ ಉಪ ಕುಲಪತಿಗಳಾದ ಡಾ|| ಎಸ್. ರಾಜೇಂದ್ರ ಪ್ರಸಾದ್ ಮತ್ತು ಅವರ ಧರ್ಮಪತ್ನಿ ಶ್ರೀಮತಿ ಪದ್ಮಿನಿ ಆರ್. ಪ್ರಸಾದ್‌ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ|| ಡಿ.ವೀರೇಂದ್ರ ಹೆಗ್ಗಡೆ, ಮಾತೃಶ್ರೀ ಹೇಮಾವತಿ ಅಮ್ಮನವರ ಸೇವೆಗಳನ್ನು ಶ್ಲಾಘಿಸಿ ಸಿರಿ ಉತ್ಪನ್ನಗಳ ಬೆಳವಣಿಗೆಗೆ ಸಂಪೂರ್ಣ ಸಹಕರಿಸುವುದಾಗಿ ತಿಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರಾದ ಶ್ರೀಯುತ ರಾಮಸ್ವಾಮಿಯವರು ಉಪಸ್ಥಿತರಿದ್ದು ಶುಭ ಹಾರೈಸಿದರು ಮತ್ತು ವಿಶ್ವವಿದ್ಯಾನಿಲಯದ ಉನ್ನತ ಅಧಿಕಾರಿಗಳಾದ ಡಾ|| ಬಿ.ಎಲ್. ಚಿದಾನಂದ, ಡಾ|| ಸಿ.ಪಿ. ಗ್ರೇಸಿ, ಡಾ|| ವೈ.ಜಿ.ಷಡಕ್ಷರಿ, ಡಾ|| ಬೈರೇಗೌಡ, ಡಾ|| ಧನಪಾಲ್, ಡಾ|| ಗಂಗಪ್ಪ ಹಾಗೂ ಕೃಷಿ ವಿಶ್ವ ವಿದ್ಯಾನಿಲಯದ ಆಸ್ತಿ ಅಧಿಕಾರಿಗಳಾದ ಕೃಷ್ಣಮೂರ್ತಿ ಮತ್ತು ಕೃಷಿ ವಿಶ್ವ ವಿದ್ಯಾನಿಲಯದ ಹಣಕಾಸು ನಿಯಂತ್ರಣಾಧಿಕಾರಿನ ಡಾ|| ಸುರೇಶ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್. ಜನಾರ್ಧನ್‌ರವರು ವಹಿಸಿದ್ದರು. ಮಳಿಗೆಗೆ ಕೃಷಿ ವಿಶ್ವ ವಿದ್ಯಾನಿಲಯದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭೇಟಿ ನೀಡಿ ಪ್ರೋತ್ಸಾಹಿಸಿದರು. ಸಂಸ್ಥೆಯ ಸಿಬ್ಬಂದಿಗಳಾದ ಜೀವನ್, ವಸಂತ್, ರವಿ ಹಾಗೂ ಶಿವಪ್ರಸಾದ್ ಉಪಸ್ಥಿತರಿದ್ದರು.