
ಬೆಂಗಳೂರು,ಮಾ.೨೫-ಸಿಲಿಕಾನ್ ಸಿಟಿ, ಉದ್ಯಾನ ನಗರಿಯ ೨೮ ವಿಧಾನಸಭಾ ಕ್ಷೇತ್ರಗಳ ಪೈಕಿ ೧೪ ಕ್ಷೇತ್ರಗಳಿಗೆ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಅವಕಾಶ ನೀಡಿದೆ. ಇನ್ನು ಬಾಕಿಯಿರುವ ೧೪ ಕ್ಷೇತ್ರಗಳಲ್ಲಿ ಪೈಪೋಟಿ ಏರ್ಪಟ್ಟಿರುವ ಹಿನ್ನೆಲೆಯಲ್ಲಿ ೨ನೇ ಪಟ್ಟಿಯಲ್ಲಿ ಬಿಡುಗಡೆಗೆ ಅವಕಾಶ ಕಲ್ಪಿಸಲು ಹೈಕಮಾಂಡ್ ಮುಂದಾಗಿದೆ.
ಎಲ್ಲಾ ೨೮ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್ ನಿರ್ಧರಿಸಿದೆ. ಇಂದು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಗಾಂಧಿನಗರದಿಂದ ದಿನೇಶ್ ಗುಂಡೂರಾವ್, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಜಮೀರ್ ಅಹಮದ್ ಖಾನ್, ಬಿಟಿಎಂ ಲೇಔಟ್‌ನಿಂದ ರಾಮಲಿಂಗಾರೆಡ್ಡಿ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರದಿಂದ ಸೌಮ್ಯರೆಡ್ಡಿಯವರಿಗೆ ಟಿಕೆಟ್ ನೀಡಲಾಗಿದೆ. ಈ ನಾಲ್ಕು ಮಂದಿ ಹಾಲಿ ಶಾಸಕರಾಗಿದ್ದಾರೆ.
ಬ್ಯಾಟರಾಯನಪುರದಿಂದ ಕೃಷ್ಣಭೈರೇಗೌಡ,ಆರ್.ಆರ್ ನಗರದಿಂದ ಕುಸುಮಾ, ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಿಂದ ಅನೂಪ್ ಅಯ್ಯಂಗಾರ್‌ಗೆ ಟಿಕೆಟ್ ನೀಡಲಾಗಿದೆ. ಅದೇ ರೀತಿ ಹೆಬ್ಬಾಳದಲ್ಲಿ ಸುರೇಶ್ ಬಿ,ಎಸ್. ಸರ್ವಜ್ಞ ನಗರದಿಂದ ಕೆ.ಜೆ ಜಾರ್ಜ್, ಶಿವಾಜಿನಗರ ರಿಜ್ವಾನ್ ಅರ್ಷದ್, ಶಾಂತಿನಗರದಿಂದ ಎನ್.ಎ ಹ್ಯಾರಿಸ್ ರವರಿಗೆ ಟಿಕೆಟ್ ನೀಡಿದೆ.
ಇತ್ತೀಚಿಗಷ್ಟೇ ಬಿಜೆಪಿ ತೊರೆದು ಕೈ ಹಿಡಿದ ಪುಟ್ಟಣ್ಣ ಅವರಿಗೆ ರಾಜಾಜಿನಗರ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಗೋವಿಂದ ರಾಜನಗರದಿಂದ ಪ್ರಿಯಾಕೃಷ್ಣ ಹಾಗೂ ವಿಜಯನಗರದಿಂದ ಎ.ಕೃಷ್ಣಪ್ಪ ಹಾಗೂ ಬಸವನಗುಡಿಯಿಂದ ಯು.ಬಿ ವೆಂಕಟೇಶ್, ಮಹದೇವಪುರದಿಂದ ಟಿ.ನಾಗೇಶ್ ರವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
ಉಳಿದ ಕ್ಷೇತ್ರಗಳಲ್ಲೂ ಪಕ್ಷದಲ್ಲಿ ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಗೆಲ್ಲುವ ಅಭ್ಯರ್ಥಿಗಳ ಬಗ್ಗೆ ಸ್ಕ್ರೀನಿಂಗ್ ಕಮಿಟಿಯಲ್ಲಿ ಪರಿಶೀಲನೆ ನಡೆಸಿ ಸಮರ್ಥ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.