ಬೆಂಗಳೂರು ತಂತ್ರಜ್ಞಾನ ಶೃಂಗಕ್ಕೆ ಚಾಲನೆ

ಬೆಂಗಳೂರು,ನ.೧೭- ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಬೆಂಗಳೂರು ತಂತ್ರಜ್ಞಾನ ಶೃಂಗಕ್ಕೆ ಇಂದು ಚಾಲನೆ ನೀಡಲಾಗಿದೆ. ಬೆಂಗಳೂರಿನ ತಾಜ್‌ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ೩ ದಿನಗಳ ಕಾಲ ನಡೆಯಲಿರುವ ೨೪ನೇ ವರ್ಷದ ಬೆಂಗಳೂರು ತಂತ್ರಜ್ಞಾನ ಶೃಂಗದ ಸಮಾವೇಶವನ್ನು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಉದ್ಘಾಟಿಸಿದರು.
ಬೆಂಗಳೂರು ತಂತ್ರಜ್ಞಾನ ಶೃಂಗದ ಸಮಾವೇಶ ಐ ಬ್ರಿಡ್ ಮಾದರಿಯಲ್ಲಿ ನಡೆದಿದ್ದು, ಜಗತ್ತಿನ ೩೦ಕ್ಕೂ ಹೆಚ್ಚು ದೇಶಗಳು ಪಾಲ್ಗೊಂಡಿವೆ.
ಈ ಶೃಂಗದಲ್ಲಿ ಜಾಗತಿಕ ಮಟ್ಟದ ೩೦೦ಕ್ಕೂ ಹೆಚ್ಚು ಕಂಪನಿಗಳು ಮತ್ತು ೫ ಸಾವಿರಕ್ಕು ಹೆಚ್ಚು ನವೋದ್ಯೋಗಿಗಳು ಈ ಶೃಂಗವನ್ನು ವರ್ಚುವಲ್ ರೂಪದಲ್ಲೇ ನಡೆಸಲಾಗುತ್ತಿದ್ದು, ವರ್ಚುವಲ್‌ನಲ್ಲೂ ೫ ಲಕ್ಷ ಆಸಕ್ತರು ವೀಕ್ಷಿಸುವರು.
ಇದೇ ಮೊದಲ ಬಾರಿಗೆ ಶೃಂಗದಲ್ಲಿ ಭಾರತೀಯ ನಾವಿನ್ಯತೆ ಮೈತ್ರಿಕೂಟ ಉಪಕ್ರಮವನ್ನು ಅಳವಡಿಸಿಕೊಳ್ಳಲಾಗಿದೆ. ಇದರ ಜತೆಗೆ ಜಾಗತಿಕ ನಾವಿನ್ಯತಾ ಮೈತ್ರಿಕೂಟದ ಅಂಗವಾಗಿ ಜರ್ಮನಿ, ಜಪಾನ್, ಇಂಗ್ಲೆಂಡ್, ಲಿಥುವೇನಿಯಾ, ಸ್ವೀಡನ್, ಸ್ವಿಜರ್‌ಲ್ಯಾಂಡ್ ಮುಂತಾದ ದೇಶಗಳೊಂದಿಗೂ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
ಡ್ರೈವಿಂಗ್ ದಿ ನೆಕ್ಸ್ಟ್ ಘೋಷವಾಕ್ಯದಡಿ ನಡೆಯಲಿರುವ ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ ಪ್ರಧಾನವಾಗಿ ಐಟಿ-ಬಿಟಿ, ಕೃಷಿ, ಆರೋಗ್ಯ, ಲಸಿಕೆ, ಸೈಬರ್ ಭದ್ರತೆ, ವೈದ್ಯಕೀಯ ಮತ್ತು ಆರ್ಥಿಕ ತಂತ್ರಜ್ಞಾನಗಳಿಗೆ ಒತ್ತು ಕೊಡಲಾಗಿದೆ.
ಈ ಶೃಂಗ ಸಭೆ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಐಟಿ-ಬಿಟಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಕೇಂದ್ರ ಸಚಿವ ರಾಜೀವ್ ಚಂದ್ರೇಖರ್, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ರಾಜ್ಯದ ಐಡಿ ವಿಷನ್ ಗ್ರೂಪ್‌ನ ಮುಖ್ಯಸ್ಥರಾದ ಕ್ರಿಸ್ ಗೋಪಾಲಕೃಷ್ಣನ್, ಬಿಟಿ ವಿಷನ್ ಗ್ರೂಪ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ, ಸ್ಟಾಟಪ್ ವಿಷನ್ ಗ್ರೂಪ್‌ನ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಎಸ್‌ಟಿಪಿಐ ನಿರ್ದೇಶಕ ಶೈಲೇಂದ್ರ ಕುಮಾರ್ ತ್ಯಾಗಿ ಮತ್ತಿತರರು ಪಾಲ್ಗೊಂಡಿದ್ದರು.