ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಪರಿಸ್ಥಿತಿ ವಿಚಾರಿಸಿದ ರಾಜ್ಯಪಾಲರು

ಬೆಂಗಳೂರು, 01.03.2024: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ಇಂದು ರಾತ್ರಿ ವೈದೇಹಿ ಆಸ್ಪತ್ರೆ ಮತ್ತು ಬ್ರೂಕ್‌ಫೀಲ್ಡ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಭೇಟಿ ನೀಡಿ, ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯದ ಪರಿಸ್ಥಿತಿ ಬಗ್ಗೆ ವಿಚಾರಿಸಿದರು.

ಗಾಯಗೊಂಡ ಸಂತ್ರಸ್ತರನ್ನು ಖುದ್ದಾಗಿ ಭೇಟಿ ಮಾಡಿದ ರಾಜ್ಯಪಾಲರು, ಗಾಯಾಳುಗಳಿಗೆ ಹಾಗೂ ಕುಟುಂಬದವರಿಗೆ ಧೈರ್ಯ ತುಂಬಿದರು.