ಬೆಂಗಳೂರು ಸೇರಿ ಮೂರು ದಿನ ರಾಜ್ಯದ ಹಲವೆಡೆ ಮಳೆ

ಬೆಂಗಳೂರು, ನ 16- ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ಮಳೆ ಮುಂದುವರೆಯಲಿದ್ದು
ಈ ತಿಂಗಳ 18ರವರೆಗೂ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹಿಂಗಾರು ಮಳೆಯಾಗಲಿದೆ ಹವಾಮಾನವ ಇಲಾಖೆ ತಿಳಿಸಿದೆ.
ಮಲೆನಾಡು ಭಾಗದಲ್ಲಿ ಮಖಡ ಬೀಳುವ ನಿರೀಕ್ಷೆಯಿದ್ದು, ಈ ತಿಂಗಳ 18 ರವರೆಗೆ ಕೇರಳ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯಲ್ಲಿ. .ಇದರ ಪರಿಣಾಮ ಕರ್ನಾಟಕದಲ್ಲೂ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ
ಬೆಂಗಳೂರಿನಲ್ಲಿ ಇಂದು ಕೂಡ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತಣ್ಣನೆಯ ಗಾಳಿ ಬೀಸುತ್ತಿದೆ. ಹೀಗಾಗಿ, ಇಂದು ಸಂಜೆಯೂ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ರಾಜ್ಯದಲ್ಲಿ ಈಶಾನ್ಯ ಮುಂಗಾರು ಚುರುಕಾಗಿದ್ದು, ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.