ಬೆಂಗಳೂರು,ಅ.೩೦-ಇಂದಿನಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆ ಆರಂಭ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಸಾಧಾರಣ ಮಳೆಯಾಗಲಿದೆ ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು. ಸಂಜೆ ಅಥವಾ ರಾತ್ರಿಯಲ್ಲಿ ಮಳೆಯಾಗಲಿದೆ.
ಕರಾವಳಿ ಭಾಗದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆಯಿಂದ ರಾಜ್ಯದ ಹಲವೆಡೆ ವರುಣನ ಅಬ್ಬರ ಹೆಚ್ಚಿನ ಮಟ್ಟದಲ್ಲಿ ಇರಲಿದೆ.
ಅಲ್ಲದೆ ನವೆಂಬರ್ ೧ ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ವಾರ ಪೂರ್ತಿ ವರುಣ ಅಬ್ಬರಿಸಲಿದ್ದಾನೆ.
ಮೈಸೂರು, ಹಾಸನ, ಕೋಲಾರ, ಶಿವಮೊಗ್ಗ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.