ಬೆಟ್ಟದಿಂದ ಅರಮನೆಗೆ ಚಾಮುಂಡೇಶ್ವರಿ ಉತ್ಸವಮೂರ್ತಿ

ಮೈಸೂರು,ಅ.26:- ತಾಯಿ ಚಾಮುಂಡೇಶ್ವರಿಯ ಉತ್ಸವಮೂರ್ತಿಯನ್ನು ವಿಶೆಷ ವಾಹನದಲ್ಲಿ ಇಂದು ಬೆಳಿಗ್ಗೆ ಚಾಮುಂಡಿಬೆಟ್ಟದಿಂದ ಮೆರವಣಿಗೆಯಲ್ಲಿ ಮೈಸೂರು ಅರಮನೆಗೆ ಕರೆತರಲಾಗಿದೆ.
ಚಾಮುಂಡಿಬೆಟ್ಟದಲ್ಲಿ ಪೂಜೆ ನೆರವೇರಿದ ಬಳಿಕ ಅರಮನೆಯತ್ತ ವಿಶೇಷ ವಾಹನದಲ್ಲಿ ಬರುತ್ತಿದ್ದು, ಅರಮನೆಯಲ್ಲಿ ವಿಶೇಷ ಪೂಜೆ ನಂತರ ಚಿನ್ನದ ಅಂಬಾರಿಯಲ್ಲಿ ನಾಡದೇವಿಯ ಪ್ರತಿಷ್ಠಾಪನೆ ನಡೆಯಲಿದೆ.ಚಾಮುಂಡಿಬೆಟ್ಟದ ಪ್ರಧಾನ ಅರ್ಚಕರಾದ ಡಾ.ಶಶಿಶೇಖರ್ ದೀಕ್ಷಿತ್ ನಾಡದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಜಯಮಾರ್ತಾಂಡ ದ್ವಾರದ ಮೂಲಕ ಪೆÇಲೀಸ್ ಬಿಗಿ ಭದ್ರತೆಯಲ್ಲಿ ಅರಮನೆಗೆ ತಾಯಿ ಚಾಮುಂಡೇಶ್ವರಿ ವಿಗ್ರಹ ಪ್ರವೇಶಿಸಿದ್ದು, ತಾಯಿ ಚಾಮುಂಡೇಶ್ವರಿ ಇಂದು ಜಂಬೂ ಸವಾರಿಯಲ್ಲಿ ಕ್ಯಾಪ್ಟನ್ ಅಭಿಮನ್ಯು ಹೊರಲಿರುವ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿ ಕಂಗೊಳಿಸಲಿದ್ದಾಳೆ.


ವಿಜಯದಶಮಿಯ ದಿನ ಚಾಮುಂಡಿ ಬೆಟ್ಟದಿಂದ ಚಾಮುಂಡೇಶ್ವರಿಯ ಉತ್ಸವಮೂರ್ತಿಯನ್ನು ಮೆರವಣಿಗೆಯಲ್ಲಿ ತಂದು ಅರಮನೆಯಲ್ಲಿ ಪೂಜೆ ನೆರವೇರಿಸಿ ಬಳಿಕ ಜಂಬೂ ಸವಾರಿಯಲ್ಲಿ ಅಭಿಮನ್ಯುವಿನ ಮೇಲೆ ಅಂಬಾರಿಯಲ್ಲಿ ಕುಳ್ಳಿರಿಸಲಾಗುವುದು. ಬಳಿಕ ತಾಯಿ ವಿಜೃಂಭಣೆಯಿಂದ ಜಂಬೂಸವಾರಿಯ ಅಂಬಾರಿಯಲ್ಲಿ ಮೆರವಣಿಗೆಯಲ್ಲಿ ಸಾಗಲಿದ್ದಾಳೆ.
ಪ್ರತಿವರ್ಷವೂ ಖುದ್ದು ಸ್ಥಳಕ್ಕೆ ತೆರಳಿ ಲಕ್ಷಾಂತರ ಮಂದಿ ವೀಕ್ಷಿಸುತ್ತಿದ್ದರು. ಆದರೆ ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಯಾರಿಗೂ ಅವಕಾಶವಿಲ್ಲದ ಕಾರಣ ತಮ್ಮ ತಮ್ಮ ಮನೆಗಳಲ್ಲಿಯೇ ದೂರದರ್ಶನದಲ್ಲಿ ಪ್ರಸಾರವಾಗುವ ನೇರ ಕಾರ್ಯಕ್ರಮದ ಮೂಲಕ ಕಣ್ತುಂಬಿಕೊಳ್ಳಲಿದ್ದಾರೆ.
ತೆರದ ವಾಹನದಲ್ಲಿ ವಿಗ್ರಹ ರವಾನೆ ಮಾಡಲಾಗಿದ್ದು, ಅರಮನೆಯಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗುತ್ತದೆ.
ತಾಯಿ ಚಾಮುಂಡೇಶ್ವರಿ ವಿಗ್ರಹಮೂರ್ತಿ ತರುವ ವೇಳೆ ರಸ್ತೆಯ ಇಕ್ಕೆಲಗಳಲ್ಲಿ ಜನ ಕಿಕ್ಕಿರಿದು ನಿಂತು ಕಣ್ತುಂಬಿಕೊಂಡರು.