ಬೆಟ್ಟದೂರು ತಾಂಡಕ್ಕೆ ನೂತನ ಬಸ್ ಸಂಚಾರ ಸೇವೆಗೆ ಸಚಿವರಿಂದ ಚಾಲನೆ

ಸಂಜೆವಾಣಿ ವಾರ್ತೆ
ಮಾನ್ವಿ.ಮಾ.೧೪- ತಾಲೂಕಿನ ಗ್ರಾಮೀಣ ಭಾಗದ ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಗ್ರಾಮೀಣ ಭಾಗದಲ್ಲಿ ಬಸ್ ಸಂಚಾರ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು.
ಪಟ್ಟಣದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ನಿಲ್ದಾಣದಲ್ಲಿ ಮಾನ್ವಿ ಯಿಂದ ಬೆಟ್ಟದೂರು ತಾಂಡ ಮಾರ್ಗಕ್ಕೆ ನೂತನ ಬಸ್ ಸಂಚಾರ ಸೇವೆಗೆ ಚಾಲನೆ ನೀಡಿ ಮಾತನಾಡಿದರು.
ಶಾಸಕ ಹಂಪಯ್ಯನಾಯಕ, ಮಾನ್ವಿ ಸಾರಿಗೆ ಘಟಕದ ವ್ಯವಸ್ಥಾಪಕರಾದ ರಾಮನಗೌಡ, ಮುಖಂಡರಾದ ರಾಜಾ ವಸಂತನಾಯಕ, ಮಹಾಂತೇಶಸ್ವಾಮಿ ರೌಡುರು, ನಾಗರಾಜ ಸೇರಿದಂತೆ ಇನ್ನಿತರರು ಇದ್ದರು.